×
Ad

ಸಾಣೂರು : ಯುವಕ ಮಂಡಲ ಆಶ್ರಯದಲ್ಲಿ ಯೋಗ ದಿನಾಚರಣೆ

Update: 2026-06-22 10:12 IST

ಕಾರ್ಕಳ: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೇರಾ ಯುವ ಭಾರತ್ ಮತ್ತು ಸಾಣೂರಿನ ಯುವಕ ಮಂಡಲದ ಜಂಟಿ ಆಶ್ರಯದಲ್ಲಿ ಸಾಣೂರು ಸುವರ್ಣ ಗ್ರಾಮೋದಯ ಸೌಧ ಸಭಾಂಗಣದಲ್ಲಿ 12ನೇ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು.

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ನ ಕಾರ್ಕಳ ವಲಯ ಅಧ್ಯಕ್ಷ ಪ್ರಮೋದ್ ಚಂದ್ರ ಪೈ ಕಾರ್ಯಕ್ರಮ ಉದ್ಘಾಟಿಸಿ ದೈನಂದಿನ ಜೀವನದಲ್ಲಿ ನಿರಂತರ ಯೋಗ ಪ್ರಾಣಾಯಾಮಗಳನ್ನು ಮಾಡಿ ಉತ್ತಮ ಆರೋಗ್ಯದಿಂದ ಇರಲು ಸರಿಯಾದ ಆಹಾರ ಪದ್ಧತಿಯನ್ನು ಅನುಸರಿಸಬೇಕೆಂದು ತಿಳಿಸಿದರು.

ಮಂಡಲದ ಅಧ್ಯಕ್ಷ ಗುರುಪ್ರಸಾದ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಯೋಗ ಗುರು ಅಶೋಕ್ ಕುಮಾರ್ ಯೋಗದಿಂದಾಗುವ ಪ್ರಯೋಜನಗಳ ಬಗ್ಗೆ ವಿವರಿಸಿದರು.

ಯುವಕ ಮಂಡಲದ ಉಪಾಧ್ಯಕ್ಷ ಮೋಹನ್ ಶೆಟ್ಟಿ, ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ಶುಭಕರ್ ಶೆಟ್ಟಿ, ಮಾಜಿ ಅಧ್ಯಕ್ಷ ಜಗದೀಶ್ ಕುಮಾರ್, ಸಾಂಸ್ಕೃತಿಕ ಕಾರ್ಯದರ್ಶಿ ಮುರಳಿ ಸುವರ್ಣ, ದತ್ತಾತ್ರೇಯ, ಸುನೀಲ್ ಕುಲಾಲ್, ರಮೇಶ್ ಪೂಜಾರಿ, ರಚಿತ್ ಜೀವನ್ ರಾವ್, ರವಿ ಆಚಾರ್ಯ, ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News