×
Ad

ಕಾರ್ಕಳ: ಕೆ.ಎಂ.ಇ.ಎಸ್. ಶಿಕ್ಷಣ ಸಂಸ್ಥೆಯಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

Update: 2026-06-22 10:24 IST

ಕಾರ್ಕಳ: ಯೋಗದಿಂದ ರೋಗ ಬಾರದ ಹಾಗೆ ತಡೆಗಟ್ಟಬಹುದು. ಪ್ರತೀ ದಿನ ಯೋಗಾಭ್ಯಾಸ ಮಾಡುವುದರಿಂದ ಕಾಯಿಲೆಗಳಿಂದ ದೂರವಿರಬಹುದು ಎ೦ದು ಕಾರ್ಕಳದ ಪತಂಜಲಿ ಯೋಗ ಸಮತಿಯ ಯೋಗ ತರಬೇತುದಾರ ಉದಯ ಕುಮಾರ್ ಕಡಂಬ ಅಭಿಪ್ರಾಯಪಟ್ಟರು.

ಕಾರ್ಕಳದ ಕೆ.ಎಂ.ಇ.ಎಸ್. ಶಿಕ್ಷಣ ಸಂಸ್ಥೆಯಲ್ಲಿ ನಡೆದ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ವಿದ್ಯಾರ್ಥಿಗಳಿಗೆ ಯೋಗಾಭ್ಯಾಸದ ತರಬೇತಿ ನೀಡಿ ಮಾತನಾಡುತ್ತಿದ್ದರು.

ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಯೋಗಾಭ್ಯಾಸದ ಅವಶ್ಯಕತೆಯಿದೆ. ವಿದ್ಯಾರ್ಥಿಗಳು ಹಿತಮಿತವಾದ ಪೌಷ್ಟಿಕ ಆಹಾರವನ್ನು ಸೇವಿಸಬೇಕು ಎಂದು ಆಹಾರ ಸೇವನೆಯ ಬಗ್ಗೆಯೂ ಅವರು ಮಾಹಿತಿ ನೀಡಿದರು.

ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲೊಲಿಟಾ ಡಿಸಿಲ್ವ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ಪ್ರಾಂಶುಪಾಲ ಕೆ.ಬಾಲಕೃಷ್ಣ ರಾವ್ ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗದ ಮುಖ್ಯ ಶಿಕ್ಷಕಿ ಶ್ರೀಮತಿ ವಂದಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News