ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಸ್ಮರಣೆ
ಉಡುಪಿ, ಜೂ.24: ಭಾರತೀಯ ಜನಸಂಘದ ಸಂಸ್ಥಾಪಕ ಹಾಗೂ ದೇಶದ ಅಖಂಡತೆ ಮತ್ತು ಏಕತೆಗಾಗಿ ತಮ್ಮ ಪ್ರಾಣವನ್ನೇ ಬಲಿದಾನಗೈದ ಧೀಮಂತ ನಾಯಕ ಶ್ಯಾಮಪ್ರಸಾದ್ ಮುಖರ್ಜಿ ಪ್ರಾತ: ಸ್ಮರಣೀಯರು. ಮುಖರ್ಜಿ ಅವರ ಜೀವನಾದರ್ಶಗಳು ಪಕ್ಷದ ಕಾರ್ಯಕರ್ತರಿಗೆ ಸದಾ ಪ್ರೇರಣಾದಾಯಕ ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಹೇಳಿದ್ದಾರೆ.
ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಇತ್ತೀಚೆಗೆ ನಡೆದ ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನದ ಸ್ಮರಣೆ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡುತಿದ್ದರು.
ಬಿಜೆಪಿ ಉಡುಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಹ ಪ್ರಭಾರಿ ಜಯಂತ್ ಕೋಟ್ಯಾನ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನಾಯಕ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.