×
Ad

‘ರಂಗವಲ್ಲಿಯ ಮೂಲಕ ಕಾರಂತರು’ ಕಾರ್ಯಕ್ರಮ ಉದ್ಘಾಟನೆ

Update: 2026-06-25 19:26 IST

ಉಡುಪಿ, ಜೂ.25: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಮತ್ತು ಸರಕಾರಿ ಪ್ರೌಢ ಶಾಲೆ ಬಸ್ರೂರು ಇದರ ಸಹಯೋಗದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ‘ಡಾ.ಕಾರಂತರ ಪರಿಚಯ ರಂಗವಲ್ಲಿಯ ಮೂಲಕ’ ಕಾರ್ಯಕ್ರಮ ಬಸ್ರೂರಿನ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.

ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಶೆಟ್ಟಿ ಎಕ್ಕಾರು ಕಾಯಕ್ರಮದ ಅಧ್ಯಕ್ಷತೆ ವಹಿಸಿ ಮಾತ ನಾಡಿ, ವಿದ್ಯಾರ್ಥಿಗಳಿಗೆ ಕಾರಂತರನ್ನು ಸರಳ ರೀತಿಯಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ರಂಗವಲ್ಲಿಯ ಮೂಲಕ ಕಾರಂತರು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಎಲ್ಲಾ ಕ್ಷೇತ್ರಗಳಲ್ಲಿಯೂ ಕಾರ್ಯ ನಿರ್ವಹಿಸಿ ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಕಾರಂತರ ಮೇರು ವ್ಯಕ್ತಿತ್ವದ ಕುರಿತು ಇಂದಿನ ಯುವ ಪೀಳಿಗೆಗೆ ಅರಿವು ಮೂಡಿಸುವುದು ಅತೀ ಅಗತ್ಯ ಎಂದರು.

ಶಾಲೆಯ ಮುಖ್ಯ ಶಿಕ್ಷಕಿ ಮಂಜುಳಾ ಜಿ.ಎಸ್. ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ‘ಚೋಮನ ದುಡಿ’ ಚಲನಚಿತ್ರದ ಔಚಿತ್ಯವನ್ನು ವಿವರಿಸಿದರು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿದ ಬಸ್ರೂರು ಶಾರದಾ ಕಾಲೇಜಿನ ಕನ್ನಡ ವಿಭಾಗದ ಉಪನ್ಯಾಸಕಿ ಮಮತಾ ಕಂಡ್ಲೂರು, ವಿದ್ಯಾರ್ಥಿಗಳು ಪುಸ್ತಕಗಳನ್ನು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದ ಕಿವಿಮಾತು ಹೇಳಿದರಲ್ಲದೇ ಕೋಟ ಕಾರಂತರ ಜೀವನ ಚರಿತ್ರೆಯನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.

ಡಾ.ಶಿವರಾಮ ಕಾರಂತ ಟ್ರಸ್ಟ್‌ನ ಸದಸ್ಯ ಡಾ.ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿದರೆ, ಡಾ.ಭಾರತಿ ಮರವಂತೆ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ಶೇಖರ ಪೂಜಾರಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News