×
Ad

ಪ್ರತ್ಯೇಕ ಪ್ರಕರಣ: ಮೂವರ ಆತ್ಮಹತ್ಯೆ

Update: 2026-06-27 21:58 IST

ಬ್ರಹ್ಮಾವರ, ಜೂ.27: ಅನಾರೋಗ್ಯದಿಂದ ಬಳಲುತ್ತಿದ್ದ ಬಾರಕೂರು ಹನೇಹಳ್ಳಿ ಗ್ರಾಮದ ಜನತಾ ಕಾಲೋನಿ ನಿವಾಸಿ ವಿಶ್ವನಾಥ(55) ಎಂಬವರು ಜೀವನದಲ್ಲಿ ಜೀಗುಪ್ಸೆಗೊಂಡು ಜೂ.26ರಂದು ಬೆಳಗ್ಗೆ ಹನೇಹಳ್ಳಿ ಗ್ರಾಮದ ಕಂಬಿಗರ ಕೊಡ್ಲು ಹಾಡಿಯಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ಕಳ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಕಾರ್ಕಳ ಪೆರ್ವಾಜೆ ರೋಡ್ ನಿವಾಸಿ, ಕೆ.ಇ.ಬಿಯ ನಿವೃತ್ತ ಲೈನ್‌ಮ್ಯಾನ್ ಸುಂದರ ಮೊಯಿಲಿ (75) ಎಂಬವರು ಜೀವನದಲ್ಲಿ ಜಿಗುಪ್ಸೆಗೊಂಡು ಜೂ.27ರಂದು ಬೆಳಗ್ಗೆ ಮನೆಯ ಅಂಗಳದಲ್ಲಿ ಮರದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಲೂರು: ವಿಪರೀತ ಮದ್ಯ ಸೇವನೆಯ ಚಟದಿಂದ ಜೂ.23ರಂದು ಜಡ್ಕಲ್ ಪೇಟೆಯ ಬಳಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಜಡ್ಕಲ್ ಗ್ರಾಮದಲ್ಲಿ ಜೆಸಿಬಿ ವಾಹನದ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ಕಾರ್ಗಲ್ ಮೂಲದ ಪ್ರಿನ್ಸ್ ವಿ.(29) ಎಂಬವರು ತೀವ್ರ ಅಸ್ವಸ್ಥಗೊಂಡು ಜೂ.27ರಂದು ಬೆಳಗಿನ ಜಾವ ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News