ಎಸ್‌ಐಆರ್ ಕುರಿತು ಜಾಗೃತಿ ಕಾರ್ಯಾಗಾರ
ಉಡುಪಿ : ನಮ್ಮನಾಡು ಒಕ್ಕೂಟ ಉಡುಪಿ ಜಿಲ್ಲೆ ಹಾಗೂ ಜಾಗೃತ ಕರ್ನಾಟಕ ಇವರ ಜಂಟಿ ಆಶ್ರಯದಲ್ಲಿ ಎಸ್‌ಐಆರ್ ಕುರಿತು ಜಾಗೃತಿ ಕಾರ್ಯಾಗಾರವು ಉಡುಪಿ ಜಾಮೀಯಾ ಮಸೀದಿಯ ಸಭಾಂಗಣದಲ್ಲಿ ಇತ್ತೀಚಿಗೆ ನಡೆಯಿತು.
ಕಾರ್ಯಾಗಾರದಲ್ಲಿ ಜಾಗೃತ ಕರ್ನಾಟಕದ ರಾಜ್ಯ ಮುಖಂಡ ನಿಸಾರ್ ಅಹ್ಮದ್, ಎಸ್‌ಐಆರ್ ಪ್ರಕ್ರಿಯೆಯ ಉದ್ದೇಶ, ಮತದಾರರು ಅನುಸರಿಸ ಬೇಕಾದ ಕ್ರಮಗಳು, ಅಗತ್ಯ ದಾಖಲೆಗಳು ಹಾಗೂ ತಮ್ಮ ಮತದಾನದ ಹಕ್ಕನ್ನು ಸಂರಕ್ಷಿಸಿಕೊಳ್ಳುವ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಸಮಿತಿಯ ಕಾನೂನು ಸಲಹೆಗಾರ ಹಾಗೂ ವಕೀಲ ಸುಹಾನ್ ಸಾಸ್ತಾನ ಎಸ್‌ಐಆರ್ ಸಂಬಂಧಿತ ಕಾನೂನು ಅಂಶಗಳು, ನಾಗರಿಕರ ಹಕ್ಕುಗಳು ಹಾಗೂ ಯಾವುದೇ ತೊಂದರೆ ಎದುರಾದಲ್ಲಿ ಅನುಸರಿಸಬೇಕಾದ ಕಾನೂನು ಕ್ರಮಗಳ ಕುರಿತು ವಿವರವಾಗಿ ಮಾರ್ಗದರ್ಶನ ನೀಡಿದರು.
ವೇದಿಕೆಯಲ್ಲಿ ಜಾಮೀಯಾ ಮಸೀದಿಯ ಅಧ್ಯಕ್ಷ ರಿಯಾಜ್ ಅಹ್ಮದ್, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶರ್ಫುದ್ದೀನ್ ಕಾಪು ಉಪಸ್ಥಿತರಿದ್ದರು. ನಮ್ಮ ನಾಡ ಒಕ್ಕೂಟ ಉಡುಪಿ ಜಿಲ್ಲಾ ಅಧ್ಯಕ್ಷ ನಕ್ವಾ ಯಾಹ್ಯಾ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಫಾಝಿಲ್ ಆದಿಉಡುಪಿ ಕಾಯಕ್ರಮ ನಿರೂಪಿಸಿದರು. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಝಫ್ರುಲ್ಲಾ ಹೂಡೆ ವಂದಿಸಿದರು.
ಕಾರ್ಯಾಗಾರದಲ್ಲಿ ವಿವಿಧ ಭಾಗಗಳಿಂದ ಆಗಮಿಸಿದ್ದ ಸಮಾಜದ ಮುಖಂಡರು, ಯುವಕರು ಹಾಗೂ ಸಾರ್ವಜನಿ ಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮದ ಪ್ರಯೋಜನ ಪಡೆದರು.