×
Ad

ಕಾರ್ಕಳ: ಎಸ್ ವಿ ಟಿ ಕಾಲೇಜಿನ ವಿದ್ಯಾರ್ಥಿ ಸಂಘ ಉದ್ಘಾಟನೆ, ಪ್ರತಿಭಾ ಪುರಸ್ಕಾರ

Update: 2026-06-29 15:36 IST

ಕಾರ್ಕಳ: ಇಲ್ಲಿನ ಎಸ್ ವಿ ಟಿ ವನಿತಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಸಂಘ ಹಾಗೂ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ನಡೆಯಿತು.

ಎಸ್ ವಿ ಎಜ್ಯುಕೇಶನ್ ಟ್ರಸ್ಟಿನ ಕೋಶಾಧ್ಯಕ್ಷ ಐ ರವೀಂದ್ರನಾಥ್ ಪೈ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.

2025 -26 ನೇ ಸಾಲಿನ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ಮೂವತ್ತೈದು ವಿದ್ಯಾರ್ಥಿಗಳನ್ನು ಎಸ್ ವಿ ಎಜುಕೇಶನ್ ಟ್ರಸ್ಟ್ ನ ಉಪಾಧ್ಯಕ್ಷ ಕಾರ್ಕಳ ಕಮಲಾಕ್ಷ ಕಾಮತ್ ಅಭಿನಂದಿಸಿದರು.

ಕಾಲೇಜಿನ ಪೂರ್ವ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಮಾಲತಿ ವಸಂತ್ ರಾಜ್ ಕಾಲೇಜಿನ 'ವಿದ್ಯಾರ್ಥಿ ನಿಧಿ'ಗೆ ಇಪ್ಪತ್ತೈದು ಸಾವಿರ ರೂಪಾಯಿ ದೇಣಿಗೆ ನೀಡಿದರು.

ಇದೇ ಸಂದರ್ಭದಲ್ಲಿ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ ಮತ್ತು ಐಡಿ ಕಾರ್ಡ್ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಹಿರಿಯ ರಂಗಕರ್ಮಿ ಚಂದ್ರನಾಥ ಬಜಗೋಳಿ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಪ್ರಾಪ್ತಿ ಶೆಟ್ಟಿ, ಉಪಾಧ್ಯಕ್ಷೆ ಸಮೀಕ್ಷಾ, ಕಾರ್ಯದರ್ಶಿ ಪ್ರೇಕ್ಷಾ ಆಚಾರ್ಯ, ಕಾಲೇಜು ಮತ್ತು ಪ್ರೌಢಶಾಲಾ ವಿಭಾಗದ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಎಸ್ ವಿ ಎಜ್ಯುಕೇಶನ್ ಟ್ರಸ್ಟಿನ ಕಾರ್ಯದರ್ಶಿ ಕೆ.ಪಿ ಶೆಣೈ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ನೇಮಿರಾಜ ಶೆಟ್ಟಿ ಕೆ ಪ್ರಾಸ್ತಾವಿಕ ಮಾತುಗಳನ್ನಾಡಿ ಸ್ವಾಗತಿಸಿದರು. ಪ್ರೌಢಶಾಲಾ ವಿಭಾಗ ಮುಖ್ಯೋಪಾಧ್ಯಾಯ ಯೋಗೇಂದ್ರ ನಾಯಕ್ ವಂದಿಸಿದರು. ಅಧ್ಯಾಪಕರಾದ ದೇವದಾಸ್ ಕೆರೆಮನೆ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಮಾತುಗಳನ್ನಾಡಿದರು ಮತ್ತು ಸುನೀಲ್ ಎಸ್. ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News