×
Ad

ಬಸ್- ಕಾರು ಢಿಕ್ಕಿ: ಓರ್ವ ಮೃತ್ಯು, ಮೂವರಿಗೆ ಗಾಯ

Update: 2026-07-01 21:05 IST

ಬ್ರಹ್ಮಾವರ: ಬಸ್ಸೊಂದು ಕಾರಿಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಹೇರೂರು ಗ್ರಾಮದ ಬೈಕಾಡಿ ಹೋಲ್‌ಸೆಲ್ ಫಿಶ್ ಅಂಗಡಿ ಎದುರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜು.1ರಂದು ಬೆಳಗ್ಗೆ 6.20ರ ಸುಮಾರಿಗೆ ನಡೆದಿದೆ.

ಮೃತರನ್ನು ಕೆಳಾರ್ಕಳಬೆಟ್ಟುವಿನ ವಿಷ್ಣುಮೂರ್ತಿ ನಗರದ ಮಂಜುನಾಥ (35) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಸತೀಶ್ ಮತ್ತು ಧನರಾಜ್ ಹಾಗೂ ಚಾಲಕ ಪ್ರಶಾಂತ್ ಗಾಯಗೊಂಡಿದ್ದಾರೆ.

ಕುಂದಾಪುರ ಕಡೆಯಿಂದ ಉಡುಪಿ ಕಡೆಗೆ ಹೋಗುತ್ತಿದ್ದ ಕಾರಿಗೆ ಬ್ರಹ್ಮಾವರ ಕಡೆಯಿಂದ ಉಡುಪಿ ಕಡೆಗೆ ಬರುತ್ತಿದ್ದ ಬಸ್ ಒಮ್ಮೆಲೆ ನಿಲ್ಲಿಸಿದ ಪರಿಣಾಮ ಕಾರು ಬಸ್ಸಿನ ಹಿಂಬದಿಗೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರ ಪರಿಣಾಮ ಕಾರಿನಲ್ಲಿದ್ದ ಮಂಜುನಾಥ, ಸತೀಶ್ ಮತ್ತು ಧನರಾಜ್ ಹಾಗೂ ಕಾರು ಚಾಲಕ ಪ್ರಶಾಂತ್ ಗಾಯಗೊಂಡರು. ಇದರಲ್ಲಿ ಗಂಭೀರವಾಗಿ ಗಾಯ ಗೊಂಡ ಮಂಜುನಾಥ್, ಬ್ರಹ್ಮಾವರ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News