×
Ad

ಉಡುಪಿ ಜಿಲ್ಲೆ ಗ್ರಾಪಂ, ವಾರ್ಡ್‌ಗಳನ್ನು ತಂಬಾಕು ಮುಕ್ತ ಪ್ರದೇಶವಾಗಿ ಷೋಷಿಸಿ: ಡಿಸಿ ಸ್ವರೂಪ ಟಿ.ಕೆ

Update: 2026-07-01 22:16 IST

ಉಡುಪಿ, ಜು.1: ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಿಲ್ಲೆಯ ಗ್ರಾಮ ಪಂಚಾಯತ್ ಹಾಗೂ ವಾರ್ಡ್‌ಗಳನ್ನು ಸಹ ತಂಬಾಕು ಮುಕ್ತ ಪ್ರದೇಶ ವನ್ನಾಗಿಸಿ ಘೋಷಿಸಲು ಬೇಕಾದ ಯೋಜನೆಗಳನ್ನು ಹಾಕಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಕರೆ ನೀಡಿದ್ದಾರೆ.

ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕೋಟ್ಪಾ-2003 ಕಾಯಿದೆ ಕುರಿತು ನಡೆದ ತ್ರೈಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯಾಘಾತಗಳಂತಹ ಮಾರಣಾಂತಿಕ ಕಾಯಿಲೆಗಳು ಬರು ತ್ತವೆ. ಸಾರ್ವಜನಿಕರು ತಂಬಾಕು ಉತ್ಪನ್ನ ಗಳಿಂದ ದೂರವಿದ್ದಾಗ ಮಾತ್ರ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯವಿದೆ.ಇದಕ್ಕೆ ಪ್ರತಿಯೊಬ್ಬರೂ ಒತ್ತು ನೀಡಬೇಕು ಎಂದವರು ಹೇಳಿದರು.

ಜಿಲ್ಲೆಯಲ್ಲಿ ಕೆಲವು ಗ್ರಾಮ ಪಂಚಾಯತ್, ಗ್ರಾಮಗಳು, ಬಹುಮಹಡಿ ವಸತಿ ಸಮುಚ್ಛಯಗಳನ್ನು ಈಗಾಗಲೇ ತಂಬಾಕು ಮುಕ್ತ ಪ್ರದೇಶಗಳನ್ನಾಗಿ ಅಧಿಕೃತ ಘೋಷಣೆಯನ್ನು ಮಾಡಲಾಗಿದೆ. ಸಾರ್ವಜನಿಕರಲ್ಲಿ ಇವುಗಳ ಸೇವನೆಯಿಂದ ಉಂಟಾಗುವ ವ್ಯತಿರಿಕ್ತ ಪರಿಣಾಮದ ಬಗ್ಗೆ ಸಮುದಾಯ ಗಳಲ್ಲಿ ಜಾಗೃತಿಗೊಳಿಸಿ ಹೆಚ್ಚು ಹೆಚ್ಚು ಗ್ರಾಮ ಪಂಚಾಯತಿಗಳನ್ನು ಹಾಗೂ ವಾರ್ಡ್‌ಗಳನ್ನು ತಂಬಾಕು ಮುಕ್ತ ಪ್ರದೇಶವನ್ನಾಗಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯ ಶಾಲಾ ಕಾಲೇಜುಗಳ ನೂರು ಮೀಟರ್ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟಕ್ಕೆ ನಿಷೇಧವಿದೆ. ತಂಬಾಕು ಉತ್ಪನ್ನಗಳ ಮಾರಾಟಕ್ಕೆ ಸ್ಥಳೀಯ ಸಂಸ್ಥೆಗಳಿಂದ ತಂಬಾಕು ಮುಕ್ತ ಮಾರಾಟ ಪರವಾನಿಗೆಯನ್ನು ಕಡ್ಡಾಯವಾಗಿ ಪಡೆಯಬೇಕು. ಪರವಾನಿಗೆ ನೀಡುವ ಸಂದರ್ಭದಲ್ಲಿ ಅಂಗಡಿಯು ಶಾಲಾ ಪರಿಮಿತಿ ಸೇರಿದಂತೆ ಮತ್ತಿತರ ನಿಯಮಗಳು ಉಲ್ಲಂಘನೆಗಳಾಗುತ್ತಿವೆಯೇ ಎಂಬ ಬಗ್ಗೆ ಪರಿಶೀಲಿಸಿ, ಪರವಾನಿಗೆ ನೀಡಬೇಕೆಂದರು.

ಜಿಲ್ಲೆಯಲ್ಲಿ 33ಕ್ಕೂ ಹೆಚ್ಚು ಧಿಡೀರ್ ದಾಳಿಗಳನ್ನು ನಡೆಸಿ, ಸೆಕ್ಷನ್ 4, ಸೆಕ್ಷನ್ 6(ಎ) ಹಾಗೂ 6(ಬಿ) ಅಡಿಯಲ್ಲಿ ಒಟ್ಟು 245ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿಕೊಂಡು 70,000 ರೂ ದಂಡ ವಸೂಲಿ ಮಾಡಲಾಗಿದೆ. ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿಯೂ ಸಹ ಕೋಟ್ಪಾ ಕಾಯಿದೆಯನ್ನು ಉಲ್ಲಂಘಿಸಿದ 31 ಪ್ರಕರಣಗಳಿಂದ 3,300 ರೂ. ದಂಡ ವಸೂಲಿ ಮಾಡಲಾಗಿದೆ ಎಂದ ಅವರು, ಜಿಲ್ಲೆಯಾದ್ಯಂತ ದಿಢೀರ್ ದಾಳಿಗಳನ್ನು ಹೆಚ್ಚು ನಡೆಸುವುದ ರೊಂದಿಗೆ ಕೋಟ್ಪಾ ಕಾುದೆಯ ಉಲ್ಲಂಘನೆ ಯಾಗದಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಅಪರ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಸರ್ವೇಕ್ಷಣಾ ಅಧಿಕಾರಿ ಡಾ.ನಾಗರತ್ನ, ತಾಲೂಕು ಆರೋಗ್ಯಾಧಿಕಾರಿ ಗಳು, ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News