×
Ad

ಗೃಹರಕ್ಷಕ ಅಧಿಕಾರಿಗಳ ತರಬೇತಿ: ಕುಂದಾಪುರದ ಸ್ನೇಹಾಗೆ ಚಿನ್ನದ ಪದಕ

Update: 2026-07-01 22:19 IST

ಉಡುಪಿ, ಜು.1: ಜಿಲ್ಲಾ ಗೃಹರಕ್ಷಕ ದಳದ ಕುಂದಾಪುರ ಘಟಕದ ಗೃಹರಕ್ಷಕಿ ಸ್ನೇಹಾ ಜೆ.ಇವರು ಬೆಂಗಳೂರಿನ ಗೃಹರಕ್ಷಕ ಮತ್ತು ಪೌರರಕ್ಷಣಾ ಪ್ರಾದೇಶಿಕ ತರಬೇತಿ ಕೇಂದ್ರದಲ್ಲಿ ಜೂನ್ 1ರಿಂದ 25ರವರೆಗೆ ನಡೆದ ರಾಜ್ಯ ಮಟ್ಟದ ಗೃಹರಕ್ಷಕರ ಅಧಿಕಾರಿಗಳ ತರಬೇತಿ (ಮಹಿಳೆಯರಿಗೆ)ಯಲ್ಲಿ ಪ್ರಥಮ ಸ್ಥಾನ ಪಡೆಯುವುದರೊಂದಿಗೆ ಚಿನ್ನದ ಪದಕ ಪಡೆದಿದ್ದಾರೆ ಎಂದು ಜಿಲ್ಲಾ ಗೃಹರಕ್ಷಕ ದಳದ ಕಮಾಂಡೆಂಟ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News