×
Ad

ಕುಂದಾಪುರ ನೂತನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಕೆದೂರು ಸದಾನಂದ ಶೆಟ್ಟಿ

Update: 2026-07-04 21:11 IST

ಕುಂದಾಪುರ, ಜು.4: ಕುಂದಾಪುರ ಬ್ಲಾಕ್ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕೆದೂರು ಸದಾನಂದ ಶೆಟ್ಟಿ ಅವರನ್ನು ನೇಮಕಗೊಳಿಸಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಆದೇಶಿದ್ದಾರೆ.

ಕೆದೂರು ಸದಾನಂದ ಶೆಟ್ಟಿ ತಕ್ಷಣ ಕುಂದಾಪುರ ಬ್ಲಾಕ್ ಕಾಂಗ್ರೆಸಿನ ಅಧಿಕಾರ ವಹಿಸಿಕೊಂಡು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲ ವರ್ಧನೆಗೆ ಕಾರ್ಯೋನ್ಮುಖವಾಗಬೇಕೆಂದು ರಾಜ್ಯಾಧ್ಯಕ್ಷರು ಸೂಚಿಸಿದ್ದಾರೆ.

ಕೆದೂರು ಸದಾನಂದ ಶೆಟ್ಟಿ, ಕುಂದಾಪುರ ತಾಲೂಕು ಪಂಚಾಯತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಪ್ರಸ್ತುತ ಕೋಟೇಶ್ವರ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News