ಜೀಪು ಢಿಕ್ಕಿ: ಪಾದಚಾರಿ ಮೃತ್ಯು
Update: 2026-07-04 22:52 IST
ಬ್ರಹ್ಮಾವರ, ಜು.4: ಜೀಪೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಜು.3ರಂದು ಮಧ್ಯಾಹ್ನ ವೇಳೆ ಉಪ್ಪೂರು ಗ್ರಾಮದ ಮೋಗವೀರ ಯುವ ಸಂಘಟನೆ ಬಸ್ ನಿಲ್ದಾಣದ ಸಮೀಪ ರಾಹೆ 66ರಲ್ಲಿ ನಡೆದಿದೆ.
ಉಡುಪಿ ಕಡೆಯಿಂದ ಬ್ರಹ್ಮಾವರ ಕಡೆಗೆ ಹೋಗುತ್ತಿದ್ದ ಜೀಪು, ರಸ್ತೆ ದಾಟಲು ನಿಂತಿದ್ದ ವ್ಯಕ್ತಿಯೊಬ್ಬರಿಗೆ ಡಿಕ್ಕಿ ಹೊಡೆ ಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಜು.4ರಂದು ಬೆಳಗಿನ ಜಾವ ಚಿಕಿತ್ಸೆ ಫಲಕಾರಿ ಯಾಗದೆ ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.