×
Ad

ಉಚಿತ ನೇತ್ರ, ಫಿಜಿಯೋಥೆರಪಿ, ರಕ್ತ ಸಕ್ಕರೆ ಅಂಶ ತಪಾಸಣೆ ಶಿಬಿರ

Update: 2026-07-05 19:05 IST

ಉಡುಪಿ: ಕೇಂದ್ರ ಸರಕಾರದ ಸಹಕಾರ ಸಚಿವಾಲಯ ಐದು ವರ್ಷ ಪೂರ್ಣಗೊಳಿಸಿದ ಸಂದರ್ಭದಲ್ಲಿ ಸಹಕಾರ ದಿಂದ ಸಮೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸಹಕಾರ ಸಪ್ತಾಹ ಆಚರಣೆ-2026 ಇದರ ಪ್ರಯುಕ್ತ ಉಡುಪಿ ಬಡಗಬೆಟ್ಟು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ ಇವುಗಳ ಸಹಯೋಗದೊಂದಿಗೆ ಉಚಿತ ಆರೋಗ್ಯ ಶಿಬಿರವನ್ನು ರವಿವಾರ ಉಡುಪಿ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದ ಮಿನಿ ಹಾಲ್‌ನಲ್ಲಿ ಏರ್ಪಡಿಸಲಾಗಿತ್ತು.

ಅಧ್ಯಕ್ಷತೆ ವಹಿಸಿದ್ದ ಬಡಗಬೆಟ್ಟು ಸೊಸೈಟಿ ಅಧ್ಯಕ್ಷ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರಿ ಸಂಘಗಳು ಕೇವಲ ಆರ್ಥಿಕ ವ್ಯವಹಾರಕ್ಕೆ ಸೀಮಿತವಾಗಿರದೆ ಜನರೊಂದಿಗೆ ಬೆರೆತು ಕಾರ್ಯಕ್ರಮಗಳನ್ನು ಮಾಡಬೇಕಾಗಿದೆ. ಜನರ ಸಂಕಷ್ಟದ ಸಂದರ್ಭ ದಲ್ಲಿ ಕೈಜೋಡಿಸಬೇಕು. ಪ್ರಕೃತಿಗೆ ಕೊಡುಗೆ ನೀಡಬೇಕು, ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು, ಶೈಕ್ಷಣಿಕ ಕ್ಷೇತ್ರಕ್ಕೆ ಸಹಕಾರ ನೀಡುವ ಕಾರ್ಯ ಮಾಡ ಬೇಕು. ಆ ನಿಟ್ಟಿನಲ್ಲಿ ಹಲವು ಕಾರ್ಯಕ್ರಮಗಳನ್ನು ನಿರಂತರವಾಗಿ ಮಾಡಿ ಕೊಂಡು ಬರುತ್ತಿದ್ದೇವೆ ಎಂದರು.

ಉಡುಪಿ ಪ್ರಸಾದ್ ನೇತ್ರಾಲಯದ ನೇತ್ರತಜ್ಞೆ ಡಾ.ಮೇಘನ ಮಾತನಾಡಿ, ನಮ್ಮ ದೇಹದಲ್ಲಿ ಕಣ್ಣು ಪ್ರಮುಖ ಅಂಗ. ಅದರ ತಪಾಸಣೆಯನ್ನು ಎಲ್ಲ ವಯೋಮಾನದವರು ಕೂಡ ವರ್ಷಕ್ಕೆ ಒಮ್ಮೆ ಮಾಡಬೇಕು. ಇಲ್ಲದಿದ್ದರೆ ಸಮಸ್ಯೆ ಗಳಿಂದ ಶಾಶ್ವತ ದೃಷ್ಟಿ ಕಳೆದುಕೊಳ್ಳುವ ಸಾಧ್ಯತೆ ಇದೆ. ಆ ನಿಟ್ಟಿನಲ್ಲಿ ಇಂತಹ ಶಿಬಿರಗಳನ್ನು ಸಾಕಷ್ಟು ಪ್ರಯೋಜನ ಕಾರಿಯಾಗಿದೆ. ನೇತ್ರದಾನ ಕೂಡ ಎಲ್ಲ ದಾನಗಳಂತೆ ಪ್ರಮುಖವಾದುದು. ಮರಣದ ನಂತರ ತಮ್ಮ ಕಣ್ಣನ್ನು ಬೇರೆಯವರಿಗೆ ನೀಡಿ ಅವರ ಬಾಳಿನಲ್ಲಿ ಬೆಳಕಾಗಬೇಕು ಎಂದರು.

ಕಾರ್ಯಕ್ರಮವನ್ನು ಉಡುಪಿ ಶ್ರೀಸಿದ್ಧಿ ವಿನಾಯಕ ದೇವಸ್ಥಾನದ ಆಡಳಿತ ಮೊಕ್ತೇಸರ ನಾಗೇಶ್ ಹೆಗ್ಡೆ ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿ ಗಳಾಗಿ ಉಡುಪಿಯ ಹಿರಿಯ ವಕೀಲ ಶಾಂತಾರಾಮ್ ಶೆಟ್ಟಿ, ಗುರು ನಿತ್ಯಾ ನಂದ ಕೋ ಆರಪೇಟಿವ್ ಸೊಸೈಟಿಯ ಅಧ್ಯಕ್ಷ ಸುರೇಶ್ ಶೆಟ್ಟಿ, ಜಿಲ್ಲಾ ಸಹಕಾರ ಯೂನಿಯನ್‌ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನುಷಾ ಕೋಟಾನ್ ಮಾತನಾಡಿದರು.

ವೇದಿಕೆಯಲ್ಲಿ ಉಡುಪಿ ಬಂಟರ ಸಂಘದ ಅಧ್ಯಕ್ಷ ಪುರುಷೋತ್ತಮ ಪಿ. ಶೆಟ್ಟಿ, ಬಡಗಬೆಟ್ಟು ಸೊಸೈಟಿಯ ಉಪಾಧ್ಯಕ್ಷ ಜಾರ್ಜ್ ಸಾಮ್ಯುವೆಲ್, ನಿರ್ದೇಶಕರಾದ ಜಯ ಶೆಟ್ಟಿ, ಸದಾಶಿವ ನಾಯ್ಕ್, ವಿನಯ ಕುಮಾರ್, ಪದ್ಮನಾಭ ನಾಯಕ್, ಎಲ್.ಉಮನಾಥ್, ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ಸ್ವಾಗತಿಸಿದರು. ಮಲ್ಪೆ ಶಾಖೆಯ ವ್ಯವಸ್ಥಾಪಕ ನವೀನ್ ಕುಮಾರ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು. ಉಡುಪಿ ಪ್ರಸಾದ್ ನೇತ್ರಾಲಯ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಹಾಗೂ ಮೆಡಿಕ್ವೆಸ್ಟ್ ಹೆಲ್ತ್‌ಕೇರ್‌ನ ಜಂಟಿ ಆಶ್ರಯದಲ್ಲಿ ನಡೆದ ಉಚಿತ ನೇತ್ರ ತಪಾಸಣೆ, ಉಚಿತ ಫಿಜಿಯೋಥೆರಪಿ ಹಾಗೂ ಉಚಿತ ರಕ್ತ ಸಕ್ಕರೆ ಅಂಶ ತಪಾಸಣೆ ಶಿಬಿರದಲ್ಲಿ ನೂರಾರು ಮಂದಿ ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News