ವೈದ್ಯರ ನಿರ್ಲಕ್ಷ್ಯ ಪ್ರಕರಣದಲ್ಲಿ ತನಿಖೆಯಾಗದೆ ವಿರೋಧ ಸಲ್ಲ: ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ
ಉಡುಪಿ, ಜು.5: ಗ್ರಾಮೀಣ ಪ್ರದೇಶಗಳಲ್ಲಿ ಇತ್ತೀಚೆಗೆ ಪ್ರಾಥಮಿಕ ಕೇಂದ್ರಗಳಲ್ಲಿ ಉತ್ತಮ ವೈದ್ಯರಿದ್ದು, ಸಾರ್ವಜನಿ ಕರಿಗೆ ಉತ್ತಮ ಸೇವೆ ಸಿಗುತ್ತಿದೆ. ವೈದ್ಯಕಿಯ ನಿರ್ಲಕ್ಷ್ಯ ಪ್ರಕರಣಗಳಲ್ಲಿ ತನಿಖೆ ನಡೆಯದೆ ವೈದ್ಯರ ವಿರುದ್ಧ ಪ್ರತಿಭಟನೆ ಮಾಡುವುದು ಸರಿಯಲ್ಲ ಎಂದು ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ ಹೇಳಿದ್ದಾರೆ.
ಉಡುಪಿ ಆದರ್ಶ ಚಾರಿಟೆಬಲ್ ಟ್ರಸ್ಟ್, ಆದರ್ಶ ಆಸ್ಪತ್ರೆ ಹಾಗೂ ಉಡುಪಿ ಜಿಲ್ಲಾ ನಿವೃತ್ತ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿ ಸಂಘದ ಆಶ್ರಯದಲ್ಲಿ ಆಸ್ಪತ್ರೆಯಲ್ಲಿ ರವಿವಾರ ನಡೆದ ವೈದ್ಯರ ದಿನಾಚರಣೆ, ಸನ್ಮಾನ, ವೈದ್ಯಕಿಯ ತಪಾಸಣಾ ಉಚಿತ ಶಿಬಿರವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಫಲಾನುಭವಿಗಳು ತುರ್ತು ಚಿಕಿತ್ಸೆ ಹೊರತುಪಡಿಸಿ ನೇರವಾಗಿ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಾ ಗುವಂತಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಶಿಫಾರಸ್ಸು ಪತ್ರದ ಮೂಲಕ ಮಾತ್ರವೇ ಖಾಸಗಿ ಆಸ್ಪತ್ರೆಗಳಲ್ಲಿ ಜನರಲ್ ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯಬಹುದು. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಮಾತನಾಡಿ, ಖಾಸಗಿ ಸಂಸ್ಥೆಗಳು ಮತ್ತು ಸರಕಾರಿ ಇಲಾಖೆಗಳು ಪರಸ್ಪರ ಕೈಜೋಡಿಸಿದಾಗ ಸಮಾಜಕ್ಕೆ ಉತ್ತಮ ಸೇವೆ ನೀಡಲು ಸಾಧ್ಯ ಎಂದು ತಿಳಿಸಿದರು.
ಉಡುಪಿ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಸವರಾಜ ಹುಬ್ಬಳಿ, ಉಡುಪಿ ಜಿಲ್ಲಾ ಸರ್ಜನ್ ಡಾ.ಎಚ್.ಅಶೋಕ್, ಐಎಂಎ ಅಧ್ಯಕ್ಷ ಡಾ.ಅಶೋಕ್ ಕುಮಾರ್, ನಿವೃತ್ತ ಪೊಲೀಸ್ ಅಧಿಕಾರಿಗಳ ಸಂಘದ ಉಪಾಧ್ಯಕ್ಷ ವೆಲೆಂಟೈನ್ ಡಿಸೋಜ, ಹೃದ್ರೋಗ ತಜ್ಞ ಡಾ.ಸುಹಾಸ್, ಆಸ್ಪತ್ರೆ ಸಿಇಒ ವಿಮಲಾ ಚಂದ್ರಶೇಖರ್ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಆದರ್ಶ ಆಸ್ಪತ್ರೆಯ ಮೂಳೆ ಮತ್ತು ಕೀಲು ರೋಗ ತಜ್ಞ ಡಾ.ಮೋಹನ್‌ಹಾಸ್ ಶೆಟ್ಟಿ, ಕಾರ್ಕಳ ಸಿಟಿ ನರ್ಸಿಂಗ್ ಹೋಂನ ಮೂಳೆ ಮತ್ತು ಕೀಲುರೋಗ ತಜ್ಞ ಡಾ.ರಿಜ್ವಾನ್ ಅಹಮದ್, ಹೊನ್ನಾವರದ ಸೇಂಟ್ ಇಗ್ನೇಶಿಯಸ್ ಆಸ್ಪತ್ರೆ ವೈದ್ಯಕಿಯ ತಜ್ಞ ಡಾ.ಆಶಿಕ್ ಕುಮಾರ್ ಹೆಗ್ಡೆ, ಕರ್ಜೆ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಸವಿತಾ ಕುಂರ್ದ, ಬಜಗೋಳಿ ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ.ಗಿರೀಶ್ ಗೌಡ ಅವರನ್ನು ಸನ್ಮಾನಿಸಲಾಯಿತು.
ಆಸ್ಪತ್ರೆಯ ಆಡಳಿತ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಸ್ವಾಗತಿಸಿ ದರು. ಅನುಶ್ರೀ ಕಾರ್ಯಕ್ರಮ ನಿರೂಪಿಸಿದರು.