×
Ad

ಭಾಷೆಗಳು ಪರಂಪರೆಯ ರಾಯಭಾರಿಯಾಗಿರಬೇಕು: ಆರೋಗ್ಯ ಸಚಿವ ಯು.ಟಿ.ಖಾದರ್

Update: 2026-07-05 20:40 IST

ಕುಂದಾಪುರ, ಜು.5: ಆಮಂತ್ರಣ ಪತ್ರಿಕೆ ಸ್ವೀಕರಿಸಿ ಮಾತನಾಡಿದ ಸಚಿವ ಖಾದರ್, ಭಾಷೆಗಳು ಕೇವಲ ಮಾತನಾಡುದಕ್ಕೆ ಮಾತ್ರ ಸೀಮಿತವಾಗ ಬಾರದು. ನಮ್ಮ ಭೌಗೋಳಿಕ ವ್ಯಾಪ್ತಿಯ ಸಾಂಸ್ಕೃತಿಕ, ಧಾರ್ಮಿಕ ಹಾಗೂ ಪರಂಪರೆಯ ರಾಯಭಾರದಂತಿರಬೇಕು ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ.ಖಾದರ್ ಹೇಳಿದ್ದಾರೆ.

ಮಂಗಳೂರು ವಿಶ್ವವಿದ್ಯಾಲಯದ ಕುಂದಾಪ್ರ ಕನ್ನಡ ಅಧ್ಯಯನ ಪೀಠ ಹಾಗೂ ಯಡಾಡಿ ಮತ್ಯಾಡಿ ಸುಜ್ಞಾನ ಎಜುಕೇಶನ್ ಟ್ರಸ್ಟ್ ಜಂಟಿ ಆಶ್ರಯದಲ್ಲಿ ಜು.6ರಂದು ವಿದ್ಯಾರಣ್ಯ ಶಾಲಾ ಆವರಣದಲ್ಲಿ ಆಯೋಜಿಸಲಾದ ಕುಂದಾಪ್ರ ಕನ್ನಡ ಭಾಷಿಕ ಪ್ರದೇಶದ ವಿದ್ಯಾರ್ಥಿಗಳ ಸಾಂಸ್ಕೃತಿಕ ಹಾಗೂ ಚಿತ್ರಕಲಾ ಸ್ಪರ್ಧೆ-ವಾಲ್ಬೆಲ್ಲ ಕಾರ್ಯ ಕ್ರಮದ ಆಮಂತ್ರಣ ಪತ್ರಿಕೆಯನ್ನು ಶನಿವಾರ ಸಂಜೆ ಕುಂದಾಪುರದಲ್ಲಿ ಸ್ವೀಕರಿಸಿ ಅವರು ಮಾತನಾಡುತಿದ್ದರು.

ಕುಂದಾಪ್ರಾ ಭಾಗದ ಸಂಸ್ಕೃತಿ, ಭಾಷೆ ಮತ್ತು ಕಲೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ಆಯೋಜಿಸಿರುವ ಈ ಸಾಂಸ್ಕೃತಿಕ ಹಾಗೂ ಚಿತ್ರಕಲಾ ಸ್ಪರ್ಧೆ ಅತ್ಯಂತ ಶ್ಲಾಘನೀಯ. ಇಂತಹ ಕಾರ್ಯ ಕ್ರಮಗಳು ಕೇವಲ ಸ್ಪರ್ಧೆಗಳಲ್ಲ; ನಮ್ಮ ನೆಲದ ಇತಿಹಾಸ, ಹಿರಿಯರ ತ್ಯಾಗ, ಸಂಪ್ರದಾಯ ಮತ್ತು ಸಂಸ್ಕೃತಿಯನ್ನು ಯುವ ಜನಾಂಗಕ್ಕೆ ತಲುಪಿಸುವ ಜೀವಂತ ಸೇತುವೆಗಳಾಗಿವೆ. ತಂತ್ರಜ್ಞಾನದ ಯುಗದಲ್ಲಿ ಆಧುನಿಕ ಶಿಕ್ಷಣದ ಜೊತೆಗೆ ನಮ್ಮ ಬೇರುಗಳ ಪರಿಚಯವೂ ಮಕ್ಕಳಿಗೆ ಅಗತ್ಯವಾಗಿದೆ. ಚಿತ್ರಕಲೆ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸುವುದರೊಂದಿಗೆ ತಮ್ಮ ನೆಲದ ಬಗ್ಗೆ ಹೆಮ್ಮೆ ಮತ್ತು ಅಭಿಮಾನವನ್ನು ಬೆಳೆಸಿಕೊಳ್ಳುತ್ತಾರೆ ಎಂದರು.

ಕುಂದಾಪ್ರ ಕನ್ನಡ ಅಧ್ಯಯನ ಪೀಠದ ಸದಸ್ಯ, ಮಾಜಿ ಸಂಸದ ಕೆ.ಜಯ ಪ್ರಕಾಶ ಹೆಗ್ಡೆ, ಸುಜ್ಞಾನ ಎಜುಕೇಶನಲ್ ಟ್ರಸ್ಟ್‌ನ ಅಧ್ಯಕ್ಷ ಡಾ.ರಮೇಶ್ ಶೆಟ್ಟಿ, ಅಧ್ಯಯನ ಪೀಠದ ಸದಸ್ಯರಾದ ರಾಜೇಶ್ ಕೆ.ಸಿ, ಉದಯ್ ಶೆಟ್ಟಿ ಪಡುಕರೆ, ಟ್ರಸ್ಟ್ ಕೋಶಾಧಿಕಾರಿ ಭರತ್ ಶೆಟ್ಟಿ, ಪೊಲೀಸ್ ನಿರೀಕ್ಷಕ ಜಯರಾಮ್ ಗೌಡ, ಎಸೈ ನಂಜಾ ನಾಯ್ಕ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News