×
Ad

ಮಹಿಳೆಯರಿಗೆ ಕಾನೂನು ಅರಿವು ಅತ್ಯಗತ್ಯ: ಪದ್ಮಪ್ರಸಾದ್ ಜೈನ್

Update: 2026-07-06 14:49 IST

ಕಾರ್ಕಳ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ.), ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ, ಕಾರ್ಕಳ ವಲಯದ ವತಿಯಿಂದ ಅಜೆಕಾರು ಕೈಕಂಬದ ಶ್ರೀ ಮಹಾದೇವಿ ಭಜನಾ ಮಂಡಳಿ (ರಿ.) ಮಹಿಳಾ ಸದಸ್ಯರಿಗಾಗಿ ಕಾನೂನು ಮಾಹಿತಿ ಶಿಬಿರವನ್ನು ಯಶಸ್ವಿಯಾಗಿ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಖ್ಯಾತ ನ್ಯಾಯವಾದಿ, ಕಾರ್ಕಳ ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಪದ್ಮಪ್ರಸಾದ್ ಜೈನ್ ಅವರು ಮಹಿಳೆಯರ ಹಕ್ಕುಗಳು, ಕುಟುಂಬ ಸಂಬಂಧಿತ ಕಾನೂನುಗಳು, ಸೈಬರ್ ಅಪರಾಧಗಳು, ಆಸ್ತಿ ಹಕ್ಕು, ಮಹಿಳಾ ಸುರಕ್ಷತೆ ಹಾಗೂ ಪ್ರಸ್ತುತ ಕಾನೂನುಗಳ ಕುರಿತು ಸರಳ ಹಾಗೂ ಪರಿಣಾಮಕಾರಿ ಮಾಹಿತಿಯನ್ನು ನೀಡಿ, ಕಾನೂನು ಅರಿವು ಪ್ರತಿಯೊಬ್ಬ ಮಹಿಳೆಯ ಜೀವನದಲ್ಲಿ ಅತ್ಯಂತ ಮಹತ್ವದ್ದಾಗಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಸಮಾಜ ಸೇವೆ, ಕಾನೂನು ಜಾಗೃತಿ ಹಾಗೂ ಜನಸಾಮಾನ್ಯರಿಗೆ ಉಚಿತ ಕಾನೂನು ಮಾರ್ಗದರ್ಶನದ ಮೂಲಕ ಸಲ್ಲಿಸುತ್ತಿರುವ ಸಮಾಜಮುಖಿ ಸೇವೆಯನ್ನು ಪರಿಗಣಿಸಿ, ಪದ್ಮಪ್ರಸಾದ್ ಜೈನ್ ಅವರನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಕಾರ್ಕಳ ವಲಯದ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮವನ್ನು ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ದಕ್ಷಿಣ ಕನ್ನಡ–ಉಡುಪಿ ಜಿಲ್ಲೆ ಉಪಾಧ್ಯಕ್ಷ ದೇವರಾಜ್ ಶೆಟ್ಟಿ, ಸುರತ್ಕಲ್ ಉದ್ಘಾಟಿಸಿ, ಕಾರ್ಕಳ ವಲಯವು ಸಮಾಜಮುಖಿ ಕಾರ್ಯಕ್ರಮಗಳನ್ನು ನಿರಂತರವಾಗಿ ಆಯೋಜಿಸುತ್ತಿರುವುದನ್ನು ಶ್ಲಾಘಿಸಿದರು.

ಶ್ರೀ ಮಹಾದೇವಿ ಭಜನಾ ಮಂಡಳಿ ಉಪಾಧ್ಯಕ್ಷೆ ಸುಮಿತ್ರಾ ಭಂಡಾರಿ, ಎಸ್.ಕೆ.ಪಿ.ಎ. ದಕ್ಷಿಣ ಕನ್ನಡ–ಉಡುಪಿ ಜಿಲ್ಲೆಯ ನಿಕಟಪೂರ್ವ ಜಿಲ್ಲಾಧ್ಯಕ್ಷ ಪದ್ಮಪ್ರಸಾದ್ ಜೈನ್, ರಾಘವೇಂದ್ರ ಆಚಾರ್ಯ, ಪ್ರಧಾನ ಕಾರ್ಯದರ್ಶಿಗಳು, ಶ್ರೀ ಮಹಾದೇವಿ ಭಜನಾ ಮಂಡಳಿ ಹಾಗೂ ಮಹಿಳಾ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು.

ಶಿಬಿರದಲ್ಲಿ ಮಹಿಳಾ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ಕಾನೂನು ವಿಷಯಗಳ ಕುರಿತು ತಮ್ಮ ಸಂದೇಹಗಳನ್ನು ಪರಿಹರಿಸಿಕೊಂಡರು.  

ಕಾರ್ಯಕ್ರಮವನ್ನು ಎಸ್.ಕೆ.ಪಿ.ಎ. ಕೋಶಾಧಿಕಾರಿ ವಿ.ಆರ್. ಸತೀಶ್ ಆಚಾರ್ಯ ಅವರು ನಿರೂಪಿಸಿದರು. ಎಸ್.ಕೆ.ಪಿ.ಎ. ಕಾರ್ಕಳ ವಲಯದ ಅಧ್ಯಕ್ಷ ಪ್ರಮೋದ್ ಚಂದ್ರ ಪೈ ಅವರು ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಶೇಖರ್ ಕುಕ್ಕುಜೆ ವಂದನಾರ್ಪಣೆ ಸಲ್ಲಿಸಿದರು.

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News