ಹಿರಿಯಡ್ಕ: ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮ
ಉಡುಪಿ, ಜು.7: ಕೇಂದ್ರ ಸರಕಾರದ ಸಹಕಾರ ಸಚಿವಾಲಯ 5 ವರ್ಷ ಪೂರ್ಣಗೊಳಿಸುತ್ತಿರುವ ಸಂದರ್ಭದಲ್ಲಿ ಸಹಕಾರದಿಂದ ಸಮೃದ್ಧಿ ಎಂಬ ಧ್ಯೇಯ ವಾಕ್ಯದೊಂದಿಗೆ ಸಹಕಾರ ಸಪ್ತಾಹ ಆಚರಣೆ ಪ್ರಯುಕ್ತ ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸೈಟಿ ಕಿನ್ನಿಮುಲ್ಕಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಸಹಕಾರ ಇಲಾಖೆ, ಉಡುಪಿ ಜಿಲ್ಲಾ ಪೊಲೀಸ್ ಮತ್ತು ಹಿರಿಯಡ್ಕ ಪೊಲೀಸ್ ಠಾಣೆಗಳ ಸಹಯೋಗದೊಂದಿಗೆ ಮಾದಕ ದ್ರವ್ಯ ಜಾಗೃತಿ ಕಾರ್ಯಕ್ರಮವನ್ನು ಮಂಗಳವಾರ ಹಿರಿಯಡ್ಕ ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್‌ನಲ್ಲಿ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಉದ್ಘಾಟಿಸಿದ ಹಿರಿಯಡ್ಕ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಪುನೀತ್ ಕುಮಾರ್ ಮಾದಕ ದ್ರವ್ಯದ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿ, ಅರಿವು ಮೂಡಿಸಿದರು. ಅಧ್ಯಕ್ಷತೆಯನ್ನು ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸಾಟಿ ಅಧ್ಯಕ್ಷ ಅರುಣ ಕುಮಾರ್ ಶೆಟ್ಟಿ ವಹಿಸಿದ್ದರು.
ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ, ಉಡುಪಿ ಜಿಲ್ಲಾ ಸಹಕಾರ ಸಂಘಗಳ ಉಪನಿಬಂಧಕಿ ಲಾವಣ್ಯ ಕೆ.ಆರ್., ಗ್ರೀನ್ ಪಾರ್ಕ್ ಸೆಂಟ್ರಲ್ ಸ್ಕೂಲ್‌ನ ಪ್ರಾಂಶುಪಾಲೆ ಕ್ಲಾರಿನಾ ನಿಕೋಲಸ್ ಮುಖ್ಯ ಅತಿಥಿಗಳಾಗಿದ್ದರು.
ಸಂಪನ್ಮೂಲ ವ್ಯಕ್ತಿಯಾಗಿ ಉಡುಪಿ ಸೈಬರ್ ಕ್ರೈಂನ ಪವನ್ ಕುಮಾರ್ ಶಾಲಾ ವಿದ್ಯಾರ್ಥಿಗಳಿಗೆ ಮಾದಕ ದ್ರವ್ಯ ಮತ್ತು ಸೈಬರ್ ಕ್ರೈಂ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಉಡುಪಿ ಇಂಡಸ್ಟ್ರಿಯಲ್ ಕೋ-ಆಪರೇಟಿವ್ ಸೊಸಾಟಿಯ ಮುಖ್ಯ ಕಾರ್ಯನಿರ್ವಣಾಧಿಕಾರಿ ರಾಜೇಶ್ ಹೆಗ್ಡೆ, ಉಡುಪಿ ಜಿಲ್ಲಾ ಸಹಕಾರ ಯೂನಿ ಯನ್ ಮುಖ್ಯ ಕಾರ್ಯನಿರ್ವಣಾಧಿಕಾರಿ ಅನುಷಾ ಕೋಟ್ಯಾನ್, ಶಾಲೆಯ ಆಡಳಿತ ವರ್ಗ, ಶಿಕ್ಷಕ ವೃಂದ, ಮತುತಿ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.