ಕೌಶಲ್ಯದಿಂದ ಬದುಕು ಹಸನು : ಡಿಎಫ್‌ಓ ಶಿವರಾಮ್ ಬಾಬು
ಬ್ರಹ್ಮಾವರ, ಜು.7: ಬ್ರಹ್ಮಾವರ ಗ್ರಾಮಾಭಿವೃದ್ಧಿ ಮತ್ತು ಸ್ವ ಉದ್ಯೋಗ ತರಬೇತಿ (ರುಡ್ ಸೆಟ್)ಸಂಸ್ಥೆಯ ಆಶ್ರಯ ದಲ್ಲಿ ಫೋಟೋಗ್ರಫಿ ಮತ್ತು ವೀಡಿಯೋಗ್ರಫಿ ತರಬೇತಿಯ ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಭಾಂಗಣದಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಮಾತನಾಡಿದ ಕುದುರೆಮುಖ ವನ್ಯ ಜೀವಿ ವಿಭಾಗದ ಉಪಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಎಂ.ಬಾಬು, ಫೋಟೋಗ್ರಫಿ ಹಾಗೂ ವೀಡಿಯೋಗ್ರಫಿ ತರಬೇತಿಯು ಬಹಳ ಬೇಡಿಕೆ ಯಿರುವ ಕ್ಷೇತ್ರವಾಗಿ ರುವುದರಿಂದ ಆಸಕ್ತಿಯನ್ನು ಹೊಂದಿ ತರಬೇತಿಯಲ್ಲಿ ಪಾಲ್ಗೊಳ್ಳಬೇಕು ಎಂದರು.
ಇಂತಹ ಅವಕಾಶಗಳನ್ನು ಎಂದಿಗೂ ವ್ಯರ್ಥ ಮಾಡದೇ, ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ಯಾವುದಾದರೂ ಒಂದು ಕ್ಷೇತ್ರದಲ್ಲಿ ಕೌಶಲ್ಯವನ್ನು ಕಲಿತು, ಪಕ್ವತೆ ಪಡೆದು ಕೊಳ್ಳುವುದು ಬಹಳ ಮುಖ್ಯ. ನಾವು ಅರಸಿಕೊಂಡು ಹೋಗುವ ಉದ್ಯೋಗ ಕೈಗೆ ಸಿಗದಿದ್ದರೂ ನಮ್ಮಲ್ಲಿರುವ ಕೌಶಲ್ಯದಿಂದ ಬದುಕು ಕಟ್ಟಿಕೊಳ್ಳಬಹುದು. ಹಾಗಾಗಿ ಕೌಶಲ್ಯದಿಂದ ಬದುಕು ಹಸನಾಗುವುದು ಖಂಡಿತ ಎಂದರು.
ಅಧ್ಯಕ್ಷತೆಯನ್ನು ರುಡ್‌ಸೆಟ್ ಸಂಸ್ಥೆಯ ನಿರ್ದೇಶಕ ಡಾ.ಬೊಮ್ಮಯ್ಯ ಎಂ. ವಹಿಸಿದ್ದರು. ಉಪನ್ಯಾಸಕಿ ಚೈತ್ರ ಕೆ. ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಹಿರಿಯ ಉಪನ್ಯಾಸಕ ಸಹಾಯಕ ಸಂತೋಷ್ ವಂದಿಸಿದರು.