×
Ad

ಮೀನುಗಾರಿಕಾ ಇಲಾಖೆಯ ವಿವಿಧ ಯೋಜನೆ: ಅರ್ಜಿ ಆಹ್ವಾನ

Update: 2026-07-08 19:36 IST

ಉಡುಪಿ, ಜು.8: ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕಾ ಇಲಾಖೆಯ ವತಿಯಿಂದ ಜಿಲ್ಲಾ ವಲಯ ಯೋಜನೆಯಡಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗಕ್ಕೆ ಸೇರಿದ ಮೀನುಗಾರರಿಗೆ ಉಚಿತವಾಗಿ ಮೀನುಗಾ ರಿಕಾ ಸಲಕರಣೆ ಕಿಟ್ ವಿತರಣೆ ಯೋಜನೆ, ಮತ್ಸ್ಯವಾಹಿನಿ ಯೋಜನೆಯಡಿ ಮೀನು ಮಾರಾಟಕ್ಕೆ ದ್ವಿಚಕ್ರ, ತ್ರಿಚಕ್ರ ಮತ್ತು ನಾಲ್ಕು ಚಕ್ರದ ವಾಹನ ಖರೀದಿಗೆ ಸಹಾಯ ಹಾಗೂ ಕರಾವಳಿ ತಾಲೂಕುಗಳ ಅರ್ಹ ಫಲಾನುಭವಿಗಳಿಗೆ ಜೀವರಕ್ಷಕ ಸಾಧನಗಳನ್ನು ಉಚಿತವಾಗಿ ವಿತರಿಸುವ ಯೋಜನೆಗಳನ್ನು ಪಾರದರ್ಶಕವಾಗಿ ಹಾಗೂ ಯಶಸ್ವಿಯಾಗಿ ಅನುಷ್ಠಾನ ಗೊಳಿಸಲು ಜಿಲ್ಲೆಯ ಅರ್ಹ ಮೀನುಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ. ಆಸಕ್ತ ಮೀನುಗಾರರು ಅರ್ಜಿಯನ್ನು ಸೇವಾಸಿಂಧು ಪೋರ್ಟಲ್‌ನಲ್ಲಿ ಸಲ್ಲಿಸಬೇಕು. ಮೂಲ ಅರ್ಜಿಯನ್ನು ದಾಖಲಾತಿಗಳೊಂದಿಗೆ ಮೀನುಗಾರಿಕೆ ಸಹಾಯಕ ನಿರ್ದೇಶಕರು, ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಕಚೇರಿಗಳಿಗೆ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಉಡುಪಿ, ಕುಂದಾಪುರ ಹಾಗೂ ಕಾರ್ಕಳ ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಛೇರಿ ಯನ್ನು ಸಂಪರ್ಕಿಸಬಹುದು ಎಂದು ಮೀನುಗಾರಿಕೆ ಇಲಾಖೆಯ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News