×
Ad

ಉಡುಪಿ: ಉಚಿತ ಕಾನೂನು ಅರಿವು ಕಾರ್ಯಕ್ರಮ

Update: 2026-07-14 20:22 IST

ಉಡುಪಿ, ಜು.14: ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಸರ್ಕಾರಿ ಪ್ರೌಢಶಾಲೆ ಇಂದಿರಾ ನಗರ ಉಡುಪಿ ಇವರ ಸಹಯೋಗದಲ್ಲಿ ಇಂದಿರಾ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಶುಕ್ರವಾರ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಕಾನೂನು ಅರಿವು ಕಾರ್ಯಕ್ರಮ ನಡೆಯಿತು.

ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ರಾದ ಸುನೀಲ ತಿ. ಮಾಸರಡ್ಡಿ ಕಾರ್ಯಕ್ರಮ ಉದ್ಘಾಟಿಸಿ, ಕಾನೂನು ಅರಿವು ಮೂಡಿಸಿದರು. ಉಡುಪಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸದಸ್ಯೆ ಸುಜಾತ ಬಿ ಕೋರಳ್ಳಿ ಗ್ರಾಹಕ ಸಂರಕ್ಷಣಾ ಕಾಯ್ದೆ 2019ರ ಕುರಿತು ಕಾನೂನು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಇಂದಿರಾ ನಗರದ ಸರ್ಕಾರಿ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಗಿರೀಶ್ ಎ ನಾಯ್ಕ, ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷೆ ಸುಮಂಗಲಾ, ಸದಸ್ಯರಾದ ಪ್ರೇಮಾನಂದ ಶೆಟ್ಟಿಗಾರ್ ಮತ್ತು ಪ್ರಕಾಶ್ ಭಟ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News