ಡಾ. ರಂಜಿತ್‌ಕುಮಾರ್ ಶೆಟ್ಟಿ ಕೃತಿಗೆ ‘ಡಾ.ಶ್ಯಾಮ್‌ಪ್ರಸಾದ್ ಪ್ರಶಸ್ತಿ’

Update: 2026-07-21 19:46 IST

ಉಡುಪಿ, ಜು.21: ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಶಾಖೆಯ ಕನ್ನಡ ವೈದ್ಯ ಬರಹಗಾರರ ಸಮಿತಿಯು ನೀಡುವ ‘ಡಾ. ಶ್ಯಾಮ್ ಪ್ರಸಾದ್’ ವರ್ಷದ ಶ್ರೇಷ್ಠ ವೈದ್ಯೇತರ ಸಾಹಿತ್ಯ ಕೃತಿ ಪ್ರಶಸ್ತಿಗೆ ಕುಂದಾಪುರದ ಡಾ.ರಂಜಿತ್ ಕುಮಾರ್ ಶೆಟ್ಟಿ ಅವರ ‘ನೆನಪಿನಾಳದಿಂದ’ ಕೃತಿ ಆಯ್ಕೆಯಾಗಿದೆ.

ಕಳೆದ 6 ವರ್ಷಗಳಿಂದ ಮಂಗಳೂರು, ಬೆಂಗಳೂರು, ಧಾರವಾಡ, ಶಿವಮೊಗ್ಗ, ಬೆಳಗಾವಿ ಮತ್ತು ಬಳ್ಳಾರಿಯಲ್ಲಿ ಯಶಸ್ವಿಯಾಗಿ ನಡೆದಿರುವ ಕನ್ನಡ ವೈದ್ಯ ಬರಹಗಾರರ ಸಮ್ಮೇಳನದ 7ನೇ ಆವೃತ್ತಿ ಆಗಸ್ಟ್ 22 ಮತ್ತು 23ರಂದು ದೊಡ್ಡಬಳ್ಳಾಪುರದ ನವೋದಯ ಶಾಲೆ ಸಭಾಂಗಣದಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಡಾ.ಶೆಟ್ಟಿ ಅವರಿಗೆ 2025-26ನೇ ಸಾಲಿನ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಸಮ್ಮೇಳನದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಸಿದ್ಧ ಹೃದ್ರೋಗ ತಜ್ಞರು ಮತ್ತು ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಡಾ. ಸುರೇಶ್ ಹನಗವಾಡಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News