ಮಾನಸಿಕ ಅಸ್ವಸ್ಥ ನಾಪತ್ತೆ

Update: 2026-07-23 21:28 IST

ಉಡುಪಿ, ಜು.23: ಮರೆವು ಹಾಗೂ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ಉಡುಪಿ ತಾಲೂಕು 80 ಬಡಗಬೆಟ್ಟು ಗ್ರಾಮದ ಅರ್ಬಿ ಎಂಬಲ್ಲಿ ವಾಸವಿದ್ದ ಗಣಪತಿ ನಾಯ್ಕ್ (54) ಎಂಬವರು 2024ರ ಅಕ್ಟೋಬರ್ 13 ರಂದು ರಾತ್ರಿ 7 ಗಂಟೆಯ ಸುಮಾರಿಗೆ ಅರ್ಬಿ ವೈಷ್ಣವಿ ದೇವಸ್ಥಾನಕ್ಕೆ ಹೋಗುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಮನೆಗೆ ಬಾರದೇ ನಾಪತ್ತೆಯಾಗಿದ್ದಾರೆ.

5 ಅಡಿ 3 ಇಂಚು ಎತ್ತರ, ಎಣ್ಣೆಕಪ್ಪು ಮೈಬಣ್ಣ, ಕೋಲು ಮುಖ ಹೊಂದಿದ್ದು, ತುಳು ಹಾಗೂ ಮರಾಠಿ ಭಾಷೆ ಮಾತನಾ ಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲಿಸ್ ಠಾಣೆಯ ಪಿ.ಐ ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ಉಡುಪಿ ಕಂಟ್ರೋಲ್ ರೂಂ ದೂ.ಸಂಖ್ಯೆ: 0820-2526444ನ್ನು ಸಂಪರ್ಕಿಸ ಬಹುದು ಎಂದು ಮಣಿಪಾಲ ಠಾಣೆಯ ಉಪನಿರೀಕ್ಷಕರ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News