ಕೋಡಿ | ಬ್ಯಾರೀಸ್ ಕಾಲೇಜಿನಲ್ಲಿ ಪ್ರಿ-ಪ್ಲೇಸ್ಮೆಂಟ್ ತರಬೇತಿ ಕಾರ್ಯಗಾರ

Update: 2026-07-25 21:20 IST

ಕುಂದಾಪುರ, ಜು.25: ಇಲ್ಲಿನ ಕೋಡಿಯಲ್ಲಿರುವ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಟ್ರೈನಿಂಗ್ ಅಂಡ್ ಪ್ಲೇಸ್ಮೆಂಟ್ ಸೆಲ್ ವತಿಯಿಂದ 2026-27ನೇ ಶೈಕ್ಷಣಿಕ ಸಾಲಿನ ಮೂರು ದಿನಗಳ ಪ್ರಿ-ಪ್ಲೇಸ್ಮೆಂಟ್ ತರಬೇತಿ ಕಾರ್ಯಗಾರ ಕಾಲೇಜಿನ ಬೀಹೈವ್ ಕನ್ವೆನ್ಷನ್ ಹಾಲ್‌ನಲ್ಲಿ ಯಶಸ್ವಿಯಾಗಿ ನಡೆಯಿತು.

ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಮಂಗಳೂರು ಸಹಯೋಗದಲ್ಲಿ ಬಿಕಾಂ, ಬಿಸಿಎ ಹಾಗೂ ಬಿಬಿಎ ವಿದ್ಯಾರ್ಥಿಗಳಿಗಾಗಿ ಈ ಕಾರ್ಯಗಾರವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕರಾದ ಅಶ್ವಿನಿ ಶೆಟ್ಟಿ ಮಾತನಾಡಿ, ತರಬೇತಿಯ ಮಹತ್ವ ಹಾಗೂ ವೃತ್ತಿಜೀವನದಲ್ಲಿ ಉದ್ಯೋಗ ಕೌಶಲ್ಯಗಳ ಪಾತ್ರದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು.

ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್, ಮಂಗಳೂರು ಸಂಸ್ಥೆಯ ಕಾರ್ಯಕ್ರಮ ವ್ಯವಸ್ಥಾಪಕರಾದ ಹರೀಶ್ ಅವರು ಉದ್ಯೋಗ ಕೌಶಲ್ಯ, ವ್ಯಕ್ತಿತ್ವ ವಿಕಸನ, ಸಂವಹನ ಕೌಶಲ್ಯ ಹಾಗೂ ಮೂರು ದಿನಗಳ ತರಬೇತಿ ಕಾರ್ಯ ಗಾರದ ಉದ್ದೇಶವನ್ನು ವಿವರಿಸಿದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಶಬೀನಾ ಹಂಝಾ ಅವರು, ಇಂದಿನ ಸ್ಪರ್ಧಾ ತ್ಮಕ ಯುಗದಲ್ಲಿ ಶೈಕ್ಷಣಿಕ ಜ್ಞಾನದ ಜೊತೆಗೆ ಉದ್ಯೋಗ ಕೌಶಲ್ಯಗಳೂ ಅತ್ಯಗತ್ಯವಾಗಿದ್ದು, ಇಂತಹ ತರಬೇತಿ ಕಾರ್ಯಕ್ರಮಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನ ಹಾಗೂ ಯಶಸ್ವಿ ವೃತ್ತಿಜೀವನಕ್ಕೆ ಭದ್ರ ಅಡಿಪಾಯವಾಗಲಿವೆ ಎಂದು ತಿಳಿಸಿದರು.

ವೇದಿಕೆಯಲ್ಲಿ ಮ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್‌ನ ಎಐ ತರಬೇತುದಾರ ದೀಪಕ್ ಬಡಿಗೇರ್, ತಾಂತ್ರಿಕ ಕೌಶಲ್ಯಗಳ ತರಬೇತುದಾರ ಜೇಡನ್ ಡಿಸೋಜಾ, ಕಾಲೇಜಿನ ಪ್ಲೇಸ್ಮೆಂಟ್ ಸಂಯೋಜಕರಾದ ಅಫ್ರೀನ್ ಖಾನ್, ಗಣಕ ವಿಭಾಗದ ಮುಖ್ಯಸ್ಥೆ ನೂತನ ಎಸ್., ವಾಣಿಜ್ಯ ವಿಭಾಗದ ಮುಖ್ಯಸ್ಥೆ ವಿನುತಾ ಯು.ಎನ್. ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ತೃತೀಯ ಬಿಸಿಎ ವಿದ್ಯಾರ್ಥಿನಿ ಆಝ್ಕಾ ಆನಂ ನಿರೂಪಿಸಿದರು. ತೃತೀಯ ಬಿಸಿಎ ವಿದ್ಯಾರ್ಥಿನಿ ಆಮ್ನಾ ಹಿಬಾ ಸ್ವಾಗತಿಸಿ, ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಮರಿಯಮ್ ಅಯ್ಯೂಬ್ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News