ಉಡುಪಿ: ವಿದ್ಯಾಪೋಷಕ್‌ನ ಶೈಕ್ಷಣಿಕ ಸಮಾವೇಶ

Update: 2026-07-26 20:57 IST

ಉಡುಪಿ, ಜು.26: ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್‌ನ ಫಲಾನುಭವಿಗಳಾದ ಪ್ರಥಮ ಪದವಿ, ಸ್ನಾತಕೋತ್ತರ, ನರ್ಸಿಂಗ್, ಕಾನೂನು ಶಾಸ್ತ್ರ ಮತ್ತು ಮೆಡಿಕಲ್‌ನ ವಿವಿಧ ವಿಭಾಗಗಳಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳ ಒಂದು ದಿನದ ಮಾರ್ಗದರ್ಶನ ಶಿಬಿರ ಸಂಸ್ಥೆಯ ಐವೈಸಿ ಸಭಾಭವನದಲ್ಲಿ ಇಂದು ಜರುಗಿತು.

ಪ್ರಧಾನ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದ್ದ ತ್ರಿಶಾ ವಿದ್ಯಾಸಂಸ್ಥೆಗಳ ಸ್ಥಾಪಕ ಸಿಎ ಗೋಪಾಲಕೃಷ್ಣ ಭಟ್ ಮಾತನಾಡಿ, ವಿದ್ಯಾರ್ಥಿಗಳು ಕೌಶಲ್ಯಗಳ ಕಲಿಕೆ, ಕಠಿಣ ಪರಿಶ್ರಮ ರೂಢಿಸಿಕೊಳ್ಳಬೇಕು. ಕೃತಜ್ಞತೆ, ಜೀವನದ ಉದ್ದೇಶ, ಗುರಿ ಇವುಗಳನ್ನು ಗಮನದಲ್ಲಿಟ್ಟು ಅಧ್ಯಯನದಲ್ಲಿ ಯಶಸ್ವಿಯಾಗಿ ಉದ್ಯೋಗ ಪಡೆದು ಬದುಕು ಕಟ್ಟಿಕೊಂಡು ಸಮಾಜದಲ್ಲಿ ಆದರ್ಶ ವ್ಯಕ್ತಿಗಳಾಗಿ ಬೆಳೆಯಬೇಕೆಂದು ಕರೆ ನೀಡಿದರು.

ಸಂಪನ್ಮೂಲ ವ್ಯಕ್ತಿಗಳಾಗಿ ವಿದ್ಯೋದಯದಲ್ಲಿ ಉಪನ್ಯಾಸಕಿಯಾಗಿರುವ ವಿದ್ಯಾಪೋಷಕ್ ಫಲಾನುಭವಿ ಪವಿತ್ರಾ, ಪ್ರತಿಮಾ ಪಾಂಗಣ್ಣಾಯ ಉಪಯುಕ್ತ ಮಾಹಿತಿಗಳನ್ನು ನೀಡಿದರು.

ಪ್ರೊ.ಕೆ.ಸದಾಶಿವ ರಾವ್, ನಾರಾಯಣ ಎಂ. ಹೆಗಡೆ, ವಿದ್ಯಾಪ್ರಸಾದ್, ಯು. ವಿಶ್ವನಾಥ ಶೆಣೈ, ಯು.ಎಸ್. ರಾಜಗೋಪಾಲ ಆಚಾರ್ಯ, ಉಮೇಶ ಭಟ್, ಎನ್.ರಾಮ ಭಟ್, ಅನಂತರಾಜ ಉಪಾಧ್ಯ, ವಸಂತ ಆರ್, ವಿಶ್ವನಾಥ ಭಾಗವಹಿಸಿದ್ದರು.

ಸಂಸ್ಥೆಯ ಉಪಾಧ್ಯಕ್ಷ ವಿ.ಜಿ.ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕ ಮಾತುಗಳನ್ನಾಡಿ ದರು. ಕಾರ್ಯದರ್ಶಿ ಮುರಲಿ ಕಡೆಕಾರ್ ಸಂಸ್ಥೆಯ ಕಾರ್ಯಚಟುವಟಿಕೆ ತಿಳಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶಿ ಮಾತುಗಳನ್ನಾಡಿದರು. ವಿದ್ಯಾ ಪೋಷಕ್‌ನ 240 ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News