ಬಂಟಕಲ್: ಕಾರ್ಗಿಲ್ ಜಯ್ ದಿವಸ್ ಆಚರಣೆ

Update: 2026-07-28 20:24 IST

ಉಡುಪಿ, ಜು.28: ಬಂಟಕಲ್ಲು ಶ್ರೀಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದ ಎನ್‌ಸಿಸಿ ಘಟಕವು ಕಾರ್ಗಿಲ್ ಯುದ್ಧದ ಸಂದರ್ಭದಲ್ಲಿ ಭಾರತೀಯ ಸಶಸ್ತ್ರ ಪಡೆಗಳು ತೋರಿದ ಧೈರ್ಯ ಮತ್ತು ತ್ಯಾಗವನ್ನು ಗೌರಸುವ ಸಲುವಾಗಿ ಕಾರ್ಗಿಲ್ ಜಯ್ ದಿವಸ್‌ನ್ನು ಇತ್ತೀಚೆಗೆ ಆಚರಿಸಿತು.

ಮುಖ್ಯ ಅತಿಥಿಯಾಗಿ ಕಾರ್ಗಿಲ್ ಯುದ್ಧದಲ್ಲಿ ಭಾಗವಸಿದ್ದ ಮಾಜಿ ಸೈನಿಕ ಸುಬೇದಾರ್ ರವೀಂದ್ರ ಕಾಮತ್, ಕಾರ್ಗಿಲ್ ಯುದ್ಧ ಸಂದರ್ಭದಲ್ಲಿ ಆದ ಅನುಭವಗಳನ್ನು ಹಂಚಿಕೊಂಡರು ಹಾಗೂ ಭಾರತೀಯ ಸಶಸ್ತ್ರ ಪಡೆಗಳ ಧೈರ್ಯ, ದೃಡತೆ ಮತ್ತು ತ್ಯಾಗಗಳನ್ನು ಸ್ಮರಿಸಿದರು.

ಈ ಸಂದರ್ಭದಲ್ಲಿ ಸುಬೇದಾರ್ ರವೀಂದ್ರ ಕಾಮತ್ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆಯ ಶೈಕ್ಷಣಿಕ ಡೀನ್ ಡಾ.ಸುದರ್ಶನ್ ರಾವ್ ಅಧ್ಯಕ್ಷತೆ ವಹಿಸಿದ್ದರು. ವಿವಿಧ ವಿಭಾಗದ ಮುಖ್ಯಸ್ಥರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News