ಬಾವಿಗೆ ಬಿದ್ದು ಮಹಿಳೆ ಮೃತ್ಯು

Update: 2026-07-28 21:19 IST

ಮಲ್ಪೆ :  ಬಾವಿಗೆ ಬಿದ್ದು ಮಹಿಳೆಯೊಬ್ಬರು ಮೃತಪಟ್ಟ ಘಟನೆ ಜು.27ರಂದು ಬೆಳಗ್ಗೆ ಕೊಡವೂರು ಗ್ರಾಮದಲ್ಲಿ ನಡೆದಿದೆ.

ಮೃತರನ್ನು ಶಾಂತ ಬೆಳ್ಚಡ (71) ಎಂದು ಗುರುತಿಸಲಾಗಿದೆ. ಇವರು ಬಾವಿಯಲ್ಲಿ ನೀರು ಸೇದುವ ಬಿಂದಿಗೆ ಹಾಗೂ ಹಗ್ಗ ಬಿದ್ದಿರುವುದನ್ನು ಮೇಲಕ್ಕೆ ಎತ್ತಲು ಪ್ರಯತ್ನಿಸುತ್ತಿರುವಾಗ ಆಕಸ್ಮಿಕವಾಗಿ ಬಾವಿಗೆ ಬಿದ್ದು, ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News