ಉಡುಪಿ: ಆರು ಕೇಂದ್ರದಲ್ಲಿ ಪೊಲೀಸ್ ನೇಮಕಾತಿ ಪರೀಕ್ಷೆ

Update: 2026-08-02 20:22 IST

ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಿದ ಪ್ರಸಕ್ತ ಸಾಲಿನ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇರ ನೇಮಕಾತಿಗಾಗಿ ಅಭ್ಯರ್ಥಿಗಳ ಲಿಖಿತ ಪರೀಕ್ಷೆಯು ರವಿವಾರ ಉಡುಪಿ ಜಿಲ್ಲೆಯಲ್ಲಿ ಒಟ್ಟು 6 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಿತು.

ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಬಾಲಕಿಯರ ಪ್ರೌಢಶಾಲೆ, ಉಡುಪಿ ಸರಕಾರಿ ಪದವಿ ಪೂರ್ವ ಕಾಲೇಜು ಮತ್ತು ಉಡುಪಿ ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜು, ಉಡುಪಿ ಎಂಜಿಎಂ ಕಾಲೇಜು, ಉಡುಪಿ ವಿದ್ಯೋದಯ ಪದವಿ ಪೂರ್ವ ಕಾಲೇಜು ಇಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.

ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮೂರು ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪೊಲೀಸ್ ಲಿಖಿತ ಪರೀಕ್ಷೆ ನಡೆಸುತ್ತಿರುವುದನ್ನು ಪರಿಶೀಲನೆ ನಡೆಸಿದರು. ಪರೀಕ್ಷೆ ಹಿನ್ನೆಲೆಯಲ್ಲಿ ಕೇಂದ್ರ ಸುತ್ತ ಬಿಗಿ ಭದ್ರತೆಯನ್ನು ಒದಗಿಸಲಾಗಿತ್ತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News