ವೈ.ಕರುಣಾಕರ ಶೆಟ್ಟರಿಗೆ ಯಕ್ಷಪೋಷಕ ಗೌರವ ಪ್ರಶಸ್ತಿ
Update: 2026-08-03 20:54 IST
ಉಡುಪಿ, ಆ.3: ಬೇಳಂಜೆ ಸಂಜೀವ ಹೆಗ್ಡೆ ಟ್ರಸ್ಟ್‌ನ ಪ್ರಾಯೋಜಕತ್ವದಲ್ಲಿ ಯಕ್ಷಗಾನ ಕೇಂದ್ರ ಇಂದ್ರಾಳಿ ನೀಡುವ 2026ನೇ ಸಾಲಿನ ಯಕ್ಷಪೋಷಕ ಗೌರವ ಪ್ರಶಸ್ತಿಗೆ ಪೆರ್ಡೂರು ಶ್ರೀಅನಂತಪದ್ಮನಾಭ ಯಕ್ಷಗಾನ ಮಂಡಳಿಯ ಯಜಮಾನ ಕಲಾಸಂಘಟಕ ವೈ.ಕರುಣಾಕರ ಶೆಟ್ಟಿ ಆಯ್ಕೆಯಾಗಿದ್ದಾರೆ.
ಪ್ರಸ್ತುತ ಕರುಣಾಕರ ಶೆಟ್ಟಿ ಅವರು ಶ್ರೀ ಕ್ಷೇತ್ರ ಹಾಲಾಡಿ ದುರ್ಗಾ ಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿ ಮತ್ತು ಸಿಗಂದೂರು ಮೇಳ ವನ್ನೂ ಮುನ್ನಡೆಸುತಿದ್ದಾರೆ.
ಯಕ್ಷಗಾನ ಕ್ಷೇತ್ರದ ಅಭಿವೃದ್ಧಿಗೆ ಇವರು ಸಲ್ಲಿಸಿರುವ ಸೇವೆಯನ್ನು ಗುರುತಿಸಿ ಇವರಿಗೆ 2026ನೇ ಯಕ್ಷಪೋಷಕ ಗೌರವ ಪ್ರಶಸ್ತಿ ನೀಡಲಾಗುತಿದ್ದು, ಪ್ರಶಸ್ತಿ ಪ್ರದಾನ ಸಮಾರಂಭ ಆ.23ರ ರವಿವಾರ ನಗರ ಪುರಭವನದಲ್ಲಿ ನಡೆಯ ಲಿದೆ. ಅಂದು ಪ್ರಸಿದ್ಧ ಯಕ್ಷಕಲಾವಿದರ ಕೂಡುವಿಕೆಯಲ್ಲಿ ಕೃಷ್ಣಾರ್ಜುನ ಕಾಳಗ ಎಂಬ ಯಕ್ಷಗಾನ ಪ್ರದರ್ಶನವೂ ನಡೆಯಲಿದೆ ಎಂದು ಯಕ್ಷಗಾನ ಕೇಂದ್ರದ ಆಡಳಿತಾಧಿಕಾರಿ ಡಾ.ಬಿ. ಜಗದೀಶ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.