ರೇಂಜಾಳ ಭೂಕುಸಿತ ಪ್ರದೇಶದಲ್ಲಿ ಜಿಎಸ್‌ಐ ತಂಡದಿಂದ ಪರಿಶೀಲನೆ
Update: 2026-08-05 20:01 IST
ಕಾರ್ಕಳ, ಆ.5: ರೆಂಜಾಳ ಗ್ರಾಮದ ಹೇಡ್ಮೆ ಪ್ರದೇಶದಲ್ಲಿ ಉಂಟಾಗಿರುವ ಭೂಕುಸಿತ ಪ್ರದೇಶಕ್ಕೆ ಜಿಯೋಲಜಿಕಲ್ ಸರ್ವೆ ಆಫ್ ಇಂಡಿಯಾ (ಜಿಎಸ್‌ಐ) ಬೆಂಗಳೂರು ತಂಡ ಬುಧವಾರ ಭೇಟಿ ನೀಡಿ, ಪರಿಶೀಲನಾ ಕಾರ್ಯದಲ್ಲಿ ತೊಡಗಿಸಿ ಕೊಂಡಿದೆ.
ಹೇಡ್ಮೆಯ ಹರಿಪ್ರಸಾದ್ ಹಾಗೂ ಸುಮಿತ್ರ ಎಂಬವರ ಮನೆಯ ಸಮೀಪ ಭೂಕುಸಿತ ಉಂಟಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಬಳಿಕ ಅವರು ಜಿಎಸ್‌ಐ ತಂಡ ವನ್ನು ಕರೆಸಿ ಪರಿಶೀಲನೆ ನಡೆಸುವಂತೆ ಕಾರ್ಕಳ ತಹಶೀಲ್ದಾರ್ ಅವರಿಗೆ ನಿರ್ದೇಶನ ನೀಡಿದ್ದರು.
ಅದರಂತೆ ತಹಶೀಲ್ದಾರ್ ಜಿಎಸ್‌ಐ ತಂಡವನ್ನು ಕರೆಸಿದ್ದು, ಅದರ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಕಾರ್ಕಳ ಕಂದಾಯ ನಿರೀಕ್ಷಕರು, ಗ್ರಾಮ ಆಡಳಿತ ಅಧಿಕಾರಿ ಹಾಜರಿದ್ದರು.