ಕಾಪು: ಕಡಲ್ಕೊರೆತ ಪ್ರದೇಶಕ್ಕೆ ಸಚಿವ ಯುಟಿ ಖಾದರ್ ಭೇಟಿ, ಪರಿಶೀಲನೆ

Update: 2026-08-07 20:14 IST

ಕಾಪು, ಆ.7: ಅರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಯು. ಟಿ ಖಾದರ್ ಫರೀದ್ ಅವರು ಶುಕ್ರವಾರ ಇತ್ತೀಚಿಗೆ ತೀವ್ರ ಕಡಲು ಕೊರೆತ ಕಾಣಿಸಿಕೊಂಡ ಕಾಪು ಲೈಟ್‌ ಹೌಸ್ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಅವರು ಕರಾವಳಿಯಲ್ಲಿ ಕಡಲುಕೊರೆತದಿಂದ ಉಂಟಾಗಿರುವ ಸಮಸ್ಯೆ ಹಾಗೂ ಅದಕ್ಕೆ ಸರಕಾರ ಕೈಗೊಂಡಿರುವ ಪರಿಹಾರ ಕ್ರಮಗಳ ಕುರಿತು ವಿವರಿಸಿದರು. ಕಡಲ್ಕೂರೆತ ತಡೆಗೆ ಶಾಶ್ವತವಾಗಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅವರು ಬಂದರು ಮತ್ತು ಮೀನುಗಾರಿಕಾ ಇಲಾಖೆಯ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸ್ಥಳೀಯರು ಹಾಗೂ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಿದ ಸಚಿವರು, ಕಡಲ್ಗೊರೆತದಿಂದ ಸಾರ್ವಜನಿಕರಿಗೆ ಹಾಗೂ ಕರಾವಳಿ ಪ್ರದೇಶಕ್ಕೆ ಉಂಟಾಗುತ್ತಿರುವ ಸಮಸ್ಯೆಗಳ ಬಗ್ಗೆ ವಿವರವಾದ ಮಾಹಿತಿ ಪಡೆದು ಈ ಬಗ್ಗೆ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚಿಸುವ ಭರವಸೆ ನೀಡಿದರು. ಅಲ್ಲದೇ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಕಾಪು ಶಾಸಕ ಸುರೇಶ್ ಶೆಟ್ಟಿ ಗುರ್ಮೆ, ಮಾಜಿ ಸಚಿವ ವಿನಯಕುಮಾರ್ ಸೊರಕೆ, ಜಿಲ್ಲಾದಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್, ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಶೋಕ್‌ಕುಮಾರ್ ಕೊಡವೂರು, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.



 


 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News