ವಕ್ವಾಡಿ ಆಸರೆ ಟ್ರಸ್ಟ್‌ನಿಂದ ವಿದ್ಯಾರ್ಥಿವೇತನ -ಸಮವಸ್ತ್ರ ವಿತರಣೆ
ಕುಂದಾಪುರ, ಆ.9: ವಕ್ವಾಡಿ ಆಸರೆ ಟ್ರಸ್ಟ್ ಆಶ್ರಯದಲ್ಲಿ ವಿದ್ಯಾರ್ಥಿವೇತನ ಹಾಗೂ ಸಮವಸ್ತ್ರ ವಿತರಣಾ ಕಾರ್ಯ ಕ್ರಮವನ್ನು ವಕ್ವಾಡಿಯ ಶ್ರೀಹಳೆಯಮ್ಮ ದೇವಿ ಸಭಾಂಗಣದಲ್ಲಿ ರವಿವಾರ ಆಯೋಜಿಸಲಾಗಿತ್ತು.
ಕಾರ್ಯಕ್ರಮವನ್ನು ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುರ್ಮಾ ಕೊಡ್ಗಿ ಉದ್ಘಾಟಿಸಿದರು. ದುಬೈ ಫಾರ್ಚೂನ್ ಗ್ರೂಪ್ ಆಫ್ ಹೋಟೆಲ್‌ನ ಆಡಳಿತ ನಿರ್ದೇಶಕ ಪ್ರವೀಣ್ ಕುಮಾರ್ ಶೆಟ್ಟಿ ವಕ್ವಾಡಿ ವಿದ್ಯಾರ್ಥಿ ವೇತನ ವಿತರಿಸಿ ಮಾತನಾಡಿದರು.
ಅಧ್ಯಕ್ಷತೆಯನ್ನು ಆಸರೆ ಟ್ರಸ್ಟ್ ಅಧ್ಯಕ್ಷ ಪ್ರವೀಣ್ ಶೆಟ್ಟಿ ಸಣಗಲ್ಲುಮನೆ ವಹಿಸಿದ್ದರು. ಕಟೀಲು ಪದವಿಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಪ್ರೊ.ಎಂ.ಬಾಲಕೃಷ್ಣ ಶೆಟ್ಟಿ ದಿಕ್ಸೂಚಿ ಭಾಷಣಗೈದರು. ಹೊನ್ನಾವರದ ಶ್ರೀದೇವಿ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಸಾಧಕ ವೈದ್ಯ ಡಾ.ಚಂದ್ರಶೇಖರ ಶೆಟ್ಟಿ ಸಾಧಕರನ್ನು ಸನ್ಮಾನಿಸಿದರು. ವೇದಿಕೆಯಲ್ಲಿ ವಕ್ವಾಡಿ ಶ್ರೀಹಳೆಯಮ್ಮ ದೇವಿ ಸಪರಿವಾರ ದೈವಸ್ಥಾನದ ಆಡಳಿತ ಮೊಕ್ತೇಸರ ಬಾಲಕೃಷ್ಣ ಶೆಟ್ಟಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಆಸರೆ ಟ್ರಸ್ಟ್‌ನ ಸಾಧಕ, ಕೋಟೇಶ್ವರ ರೋಟರಿ ಕ್ಲಬ್‌ನ ನೂತನ ಕಾರ್ಯದರ್ಶಿ ಅರುಣ್ ದೇವಾಡಿಗ, ಲಯನ್ಸ್ ಕ್ಲಬ್ ತೆಕ್ಕಟ್ಟೆಯ ನೂತನ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ನಿವೃತ್ತ ಶಿಕ್ಷಕ ಅಶೋಕ್ ಶೆಟ್ಟಿ, ಚಂದ್ರಶೇಖರ ಶೆಟ್ಟಿ ಮತ್ತು ಕ್ರೀಡಾ ಕ್ಷೇತ್ರದಲ್ಲಿ ಸಾಧನೆಗೈದ ನಂದಿನಿ ಅವರನ್ನು ಸನ್ಮಾನಿಸಲಾಯಿತು.
ಸ್ಥಳೀಯ ಸಾಧಕ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ, ಅಶಕ್ತರಿಗೆ ಆರ್ಥಿಕ ನೆರವು ಹಾಗೂ ಸ್ಥಳೀಯ ಅಂಗನವಾಡಿ ಮತ್ತು ಹೈಸ್ಕೂಲ್ ವಿದ್ಯಾರ್ಥಿಗಳಿಗೆ ಸಮವಸ್ತ್ರಗಳನ್ನು ವಿತರಿಸಲಾಯಿತು.
ಅಸರೆ ಸಂಸ್ಥೆಯ ಸದಸ್ಯ ಹಾಗೂ ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ಕೀರ್ತಿ ಶೆಟ್ಟಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಟ್ರಸ್ಟ್‌ನ ಕಾರ್ಯದರ್ಶಿ ಸತೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ಕೋಶಾಧಿಕಾರಿ ಆನಂದ್ ಆಚಾರ್ಯ ವಂದಿಸಿದರು.