ಸುಳ್ಯ: ಯುವ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆ
Update: 2026-08-10 19:07 IST
ಸುಳ್ಯ, ಆ.10: ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಹಾಗೂ ಸುಳ್ಯ ಯುವ ಕಾಂಗ್ರೆಸ್ ಸಮಿತಿಗಳ ಜಂಟಿ ಆಶ್ರಯದಲ್ಲಿ ಭಾರತೀಯ ಯುವ ಕಾಂಗ್ರೆಸ್‌ನ ಸಂಸ್ಥಾಪನಾ ದಿನಾಚರಣೆಯು ಸುಳ್ಯದಲ್ಲಿ ನಡೆಯಿತು.
ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಇಬ್ರಾಹಿಂ ನಝ್ ಯುವ ಕಾಂಗ್ರೆಸ್ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಎಐಸಿಸಿ ವೀಕ್ಷಕ ಹಾಗೂ ಶಾಸಕ ಕೆ. ಜಯಂತ್, ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಸಂಸದ ಜಯಪ್ರಕಾಶ್ ಹೆಗ್ಡೆ, ಕರ್ನಾಟಕ ರಾಜ್ಯ ಕನಿಷ್ಠ ವೇತನ ಮಂಡಳಿಯ ಅಧ್ಯಕ್ಷ ಟಿ.ಎಂ. ಶಹೀದ್ ತೆಕ್ಕಿಲ್, ಸುಳ್ಯ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಚೇತನ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಧಾಕೃಷ್ಣ ಮತ್ತಿತರರು ಉಪಸ್ಥಿತರಿದ್ದರು.