ಕಥೋಲಿಕ್ ಸಭಾ ನೂತನ ಆಧ್ಯಾತ್ಮಿಕ ನಿರ್ದೇಶಕರಿಗೆ ಸನ್ಮಾನ

Update: 2026-08-11 18:48 IST

ಉಡುಪಿ, ಆ.11: ಉಡುಪಿ ಧರ್ಮ ಪ್ರಾಂತ್ಯದ ಕಥೋಲಿಕ್ ಸಭಾ ಕೇಂದ್ರೀಯ ಸಮಿತಿಯ ಆಧ್ಯಾತ್ಮಿಕ ನಿರ್ದೇಶಕ ರಾಗಿ ನೇಮಕಗೊಂಡ ಉದ್ಯಾವರ ಸಂತ ಫ್ರಾನ್ಸಿಸ್ ಕ್ಸೇವಿಯರ್ ದೇವಾಲಯದ ಪ್ರಧಾನ ಧರ್ಮಗುರು ವಂ.ಅನಿಲ್ ಡಿಸೋಜ ಅವರನ್ನು ವಿವಿಧ ಸಂಘಟನೆಗಳ ವತಿಯಿಂದ ಸನ್ಮಾನಿಸಲಾಯಿತು.

ವಂ.ಅನಿಲ್ ಡಿಸೋಜ ಅವರಿಗೆ ನಿರಂತರ ಉದ್ಯಾವರ ಸಂಘಟನೆಯ ವತಿಯಿಂದ ಉನ್ನತ ಹುದ್ದೆ ಸ್ವೀಕರಿಸಿದ ಹಿನ್ನೆಲೆ ಯಲ್ಲಿ ಅಭಿನಂದಿಸಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದಾಯ್ಜಿ ವರ್ಲ್ಡ್ ಮಾಧ್ಯಮದ ಮುಖ್ಯಸ್ಥ ವಾಲ್ಟರ್ ನಂದಳಿಕೆ, ಸಿನಿಮಾ ನಿರ್ದೇಶಕ ಸ್ಟ್ಯಾನಿ ಬೆಳಾ, ನಿರಂತರ ಅಧ್ಯಕ್ಷ ರೋಷನ್ ಕ್ರಾಸ್ಟೊ, ಪ್ರಮುಖರಾದ ಮೈಕಲ್ ಡಿಸೋಜ ಸ್ಟೀವನ್ ಕುಲಾಸೊ ಮತ್ತಿತರರು ಉಪಸ್ಥಿತರಿದ್ದರು.

ಕಥೋಲಿಕ್ ಸಭಾ ಉದ್ಯಾವರ ಘಟಕವು ತನ್ನ ಮಾಸಿಕ ಸಭೆಯಲ್ಲಿ ವಂ. ಅನಿಲ್ ಡಿಸೋಜ ಅವರನ್ನು ಅಭಿನಂದಿಸಿ, ಸನ್ಮಾನಿಸಿದೆ. ಈ ಸಂದರ್ಭದಲ್ಲಿ ಕೇಂದ್ರೀಯ ಸಮಿತಿಯ ನಿಕಟಪೂರ್ವ ಅಧ್ಯಕ್ಷ ರೊನಾಲ್ಡ್ ಅಲ್ಮೆಡ, ಮಾಜಿ ಅಧ್ಯಕ್ಷ ಮೇರಿ ಡಿಸೋಜ, ಕಥೋಲಿಕ್ ಸಭಾ ಉದ್ಯಾವರ ಘಟಕದ ಅಧ್ಯಕ್ಷ ಸ್ಟೀವನ್ ಲುವಿಸ್, ಕಾರ್ಯದರ್ಶಿ ಉಷಾ ಲವೀನಾ ಲೋಬೊ, ನಿಯೋಜಿತ ಅಧ್ಯಕ್ಷ ರೋಯ್ಸ್ ಫೆರ್ನಾಂಡಿಸ್, ನಿಕಟಪೂರ್ವ ಅಧ್ಯಕ್ಷೆ ಐರಿನ್ ಪಿರೇರಾ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News