ಸರ್ಕಾರೇತರ ವಸತಿ ನಿಲಯಗಳ ಶಾಲೆ, ಕಾಲೇಜುಗಳ ನೋಂದಣಿ: ಅರ್ಜಿ ಆಹ್ವಾನ
ಉಡುಪಿ, ಆ.11: ಬಾಲ ನ್ಯಾಯ ಕಾಯ್ದೆಯನ್ವಯ ನೋಂದಣಿ ಯಾಗಿರುವ ಸಂಸ್ಥೆ/ವಸತಿ ನಿಲಯಗಳನ್ನು ಹೊರತು ಪಡಿಸಿ 6ರಿಂದ 18 ವರ್ಷದೊಳಗಿನ ಮಕ್ಕಳಿಗಾಗಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸರ್ಕಾರೇತರ ಸಂಸ್ಥೆಗಳು, ನಾಗರಿಕ ಸಮಾಜ ಸಂಸ್ಥೆಗಳು, ಟ್ರಸ್ಟ್, ಧಾರ್ಮಿಕ, ಖಾಸಗಿ, ವೈಯಕ್ತಿಕವಾಗಿ ನಡೆಸಲ್ಪಡುವ ಯಾವುದೇ ಔಪಚಾ ರಿಕ, ಅನೌಪಚಾರಿಕ ಶೈಕ್ಷಣಿಕ ವಸತಿ ನಿಲಯ, ವಸತಿ ಶಾಲೆ, ಕಾಲೇಜುಗಳನ್ನು ಕಡ್ಡಾಯವಾಗಿ ನೋಂದಾಯಿಸಬೇಕಾಗಿದೆ.
ಇದಕ್ಕಾಗಿ ಅರ್ಜಿ ನಮೂನೆಗಳನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಉಡುಪಿ ಇವರಿಂದ ಪಡೆದು ಸೆಪ್ಟೆಂಬರ್ 4 ರೊಳಗೆ ಭರ್ತಿ ಮಾಡಿ ಸಲ್ಲಿಸಬಹುದು. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿ ಗಾಗಿ ಜಿಲ್ಲಾ ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ 204, ಮೊದಲನೇ ಮಹಡಿ, ರಜತಾದ್ರಿ, ಮಣಿಪಾಲ ದೂ.ಸಂ:0820-2574978ನ್ನು ಸಂಪರ್ಕಿಸುವಂತೆ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರ ಪ್ರಕಟಣೆ ತಿಳಿಸಿದೆ.