ಮಿಲಾಗ್ರಿಸ್‌ನಲ್ಲಿ ವಿಶೇಷ ತರಬೇತಿ ಕಾರ್ಯಕ್ರಮ
Update: 2026-08-12 19:35 IST
ಉಡುಪಿ, ಆ.12: ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ಇತ್ತೀಚೆಗೆ ನಾಯಕತ್ವ, ನಾವಿನ್ಯತೆ ಮತ್ತು ಭವಿಷ್ಯದ ಕೌಶಲ್ಯಗಳ ಕುರಿತಾದ ವಿಶೇಷ ತರಬೇತಿ ಕಾರ್ಯಕ್ರಮವನ್ನು ಎಂ.ಜೈ ಕಿಶನ್ ಭಟ್ ನೇತೃತ್ವದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಜೀವನದಲ್ಲಿ ಯಶಸ್ಸು ಸಾಧಿಸಲು ಅಗತ್ಯವಾದ ಕೌಶಲ್ಯಗಳು ಮತ್ತು ಉತ್ತಮ ಮೌಲ್ಯಗಳ ಕುರಿತು ಮಾರ್ಗದರ್ಶನ ನೀಡಲಾಯಿತು. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ, ಆತ್ಮವಿಶ್ವಾಸ, ಸೃಜನಶೀಲತೆ, ಸಂವಹನ ಕೌಶಲ್ಯ ಮತ್ತು ಭವಿಷ್ಯದ ಸವಾಲುಗಳನ್ನು ಎದುರಿಸುವ ಸಾಮರ್ಥ್ಯವನ್ನು ಬೆಳೆಸುವುದರಲ್ಲಿ ಸಹಕರಿಸಿತು.
ಅಧ್ಯಕ್ಷತೆಯನ್ನು ಮಿಲಾಗ್ರಿಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ರೆ.ಫಾ.ಮೆಲ್ವಿನ್ ಮೆಂಡೋನ್ಸಾ ಎಸ್.ಜೆ. ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ, ಆಯೋಜಕಿ ಪೂರ್ಣಿಮಾ ಜಿ.ಎ. ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರುವಿನಾ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.