ಸುಮೇಧಾ ಫ್ಯಾಷನ್ ನಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮ

Update: 2026-08-12 19:44 IST

ಕಾರ್ಕಳ : ಶ್ರೀನಿವಾಸ ಸೇವಾ ಟ್ರಸ್ಟ್ , ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಕಾರ್ಕಳ ಇದರ ಆಶ್ರಯದಲ್ಲಿ ಮಹಿಳೆಯರಿಗಾಗಿ ಕಾನೂನು ಮಾಹಿತಿ ಕಾರ್ಯಕ್ರಮವು ಕಾರ್ಕಳ ಎಸ್ ಜೆ ಆರ್ಕೆಡ್ ನಲ್ಲಿರುವ ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಭಾಂಗಣದಲ್ಲಿ ನಡೆಯಿತು.

ಕಾನೂನು ಮಾಹಿತಿ ಕಾರ್ಯಾಗಾರವನ್ನು ಕಾರ್ಕಳ ಗ್ರಾಮಾಂತರ ಠಾಣಾ ಪ್ರೊಬೆಷನರಿ ಪಿ ಎಸ್ ಐ ಸೀಮಾ ಅಂಜುಮ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸೀಮಾ ಅಂಜುಮ್ ರವರು ಮಹಿಳೆಯರಿಗೆ ,ವಿವಿಧ ಸಂದರ್ಭದಲ್ಲಿ, ವಿವಿಧ ವ್ಯಕ್ತಿಗಳಿಂದ, ವಿವಿಧ ಸ್ಥಳಗಳಲ್ಲಿ ನಡೆಯುವ ಲೈಂಗಿಕ ದೌರ್ಜನ್ಯಗಳು, ದೌರ್ಜನ್ಯ ತಡೆಯುವಬಗ್ಗೆ ಎಚ್ಚರಿಕೆ ವಿಧಾನ ಹಾಗೂ ಲೈಂಗಿಕ ದೌರ್ಜನ್ಯಗಳು ನಡೆದಾಗ ತೆಗೆದುಕೊಳ್ಳುವ ಕಾನೂನು ಕ್ರಮಗಳು ಮಾತ್ರವಲ್ಲದೆ ಪೋಕ್ಸೋ ಕಾಯಿದೆ, ಬಾಲ್ಯ ವಿವಾಹ ಕಾಯ್ದೆ, ಸಂಚಾರಿ ಕಾಯ್ದೆ, ಕೌಟುಂಬಿಕ ಸಮಸ್ಯೆ ಕಾಯ್ದೆಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಮಹಿಳೆಯರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು. ಸುಮೇಧಾ ಫ್ಯಾಷನ್ ಇನ್ಸ್ಟಿಟ್ಯೂಟ್ ಸಂಸ್ಥಾಪಕಿ ಸಾಧನ ಜಿ ಅಶ್ರೀತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು ಶಿಕ್ಷಕಿ ಸೌಜನ್ಯ ಉಪಸ್ಥಿತರಿದ್ದರು. ಸಹನಾ ಪ್ರಾರ್ಥನೆ ನೆರವೇರಿಸಿದರು.

ಕಾವ್ಯ ಸ್ವಾಗತಿಸಿದರು, ಶ್ವೇತಾ ಧನ್ಯವಾದವಿತ್ತರು, ಸಂಜನಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News