ದೈವಸ್ಥಾನದ ಕಾಣಿಕೆ ಡಬ್ಬಿ ಕಳವು

Update: 2026-08-12 21:15 IST

ಪಡುಬಿದ್ರೆ, ಆ.12: ಇನ್ನಾ ಗ್ರಾಮದ ಮಡ್ಮಣ್ ಎಂಬಲ್ಲಿರುವ ಶ್ರೀವ್ಯಾಘ್ರ ಚಾಮುಂಡೇಶ್ವರಿ ದೈವಸ್ಥಾನಕ್ಕೆ ಆ.11ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ನಗದು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.

ದೈವಸ್ಥಾನದ ಮುಂಭಾಗದ ಬಾಗಿಲಿನ ಬೀಗವನ್ನು ಮುರಿದು ಒಳ ನುಗ್ಗಿದ ಕಳ್ಳರು, ಎರಡು ಕಾಣಿಕೆ ಡಬ್ಬಿಗಳನ್ನು ಒಡೆದು ಅದರಲ್ಲಿದ್ದ ಸುಮಾರು 1,20,000ರೂ ಹಣವನ್ನು ಕಳವು ಮಾಡಿಕೊಂಡು ಹೋಗಿರುವುದಾಗಿ ದೂರಲಾಗಿದೆ. ಈ ಬಗ್ಗೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News