ಗೂಡ್ಸ್ ರೈಲು ಢಿಕ್ಕಿ: ಅಪರಿಚಿತ ಮೃತ್ಯು
Update: 2026-08-12 21:16 IST
ಬೈಂದೂರು : ಚಲಿಸುತ್ತಿದ್ದ ಗೂಡ್ಸ್ ರೈಲು ಢಿಕ್ಕಿ ಹೊಡೆದು ಅಪರಿಚಿತ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಆ.11ರಂದು ಸಂಜೆ ವೇಳೆ ಬೈಂದೂರು ಗ್ರಾಮದ ಬಾಡ ಎಂಬಲ್ಲಿ ನಡೆದಿದೆ.
ಮಡಗಾಂವನಿಂದ ಮಂಗಳೂರಿಗೆ ಹೋಗುತ್ತಿದ್ದ ಗೂಡ್ಸ್ ರೈಲು, ಹಳಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಸುಮಾರು ೩೦ ರಿಂದ ೪೦ ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಗೆ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.