ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ಸ್ವಾತಂತ್ರ್ಯೋತ್ಸವ
Update: 2026-08-15 17:42 IST
ಉಡುಪಿ, ಆ.15: ಬಡಗಬೆಟ್ಟು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಯಲ್ಲಿ ದೇಶದ 80ನೇ ಸ್ವಾತಂತ್ರ್ಯೋತ್ಸವ ವನ್ನು ಆಚರಿಸಲಾಯಿತು.
ಧ್ವಜಾರೋಹಣವನ್ನು ಮಾಜಿ ಸೈನಿಕ ಕರ್ನಲ್(ಡಾ.)ಫ್ರಾನ್ಸಿಸ್ ಇ.ಎ.ರೊಡ್ರಿಗಸ್ ನೆರವೇರಿಸಿದರು. ಈ ಸಂದರ್ಭ ಅವರನ್ನು ಸಂಘದ ವತಿಯಿಂದ ಗೌರವಿಸಲಾಯಿತು.
ಸೊಸೈಟಿಯ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸೊಸೈಟಿಯ ಉಪಾಧ್ಯಕ್ಷ ಜಾರ್ಜ್ ಸ್ಯಾಮ್ಯುಯೆಲ್, ಶತಮಾನೋತ್ಸವ ಸಮಿತಿ ಸಂಚಾಲಕ ಪುರುಷೋತ್ತಮ ಪಿ.ಶೆಟ್ಟಿ, ಆಡಳಿತ ಮಂಡಳಿ ಸದಸ್ಯರು, ಸಿಬ್ಬಂದಿ ವರ್ಗ ಹಾಗೂ ದೈನಿಕ ಠೇವಣಿ ಸಂಗ್ರಾಹಕರು ಉಪಸ್ಥಿತರಿದ್ದರು.
ಸೊಸೈಟಿಯ ಪ್ರಧಾನ ವ್ಯವಸ್ಥಾಪಕ ರಾಜೇಶ್ ವಿ.ಶೇರಿಗಾರ್ ಸ್ವಾಗತಿಸಿ, ಸಹಾಯಕ ಪ್ರಧಾನ ವ್ಯವಸ್ಥಾಪಕ ಪ್ರವೀಣ್ ಕುಮಾರ್ ವಂದಿಸಿದರು. ಮಲ್ಪೆ ಶಾಖಾ ವ್ಯವಸ್ಥಾಪಕ ನವೀನ್ ಕೆ. ಕಾರ್ಯಕ್ರಮ ನಿರೂಪಿಸಿದರು.