ಉಡುಪಿ ಜಿಲ್ಲೆಯ ವಿವಿಧೆಡೆ ಸ್ವಾತಂತ್ರ್ಯೋತ್ಸವ ಆಚರಣೆ

Update: 2026-08-15 17:59 IST

ಬಿಲಾಲ್ ಮಸೀದಿ: ಎಂ.ಕೋಡಿಯ ಬಿಲಾಲ್ ಜುಮಾ ಮಸೀದಿಯಲ್ಲಿ ಮಸೀದಿಯ ಖತೀಬ್ ಅಬ್ದುಲ್ ಅಝೀಝ್ ಅಮಾನಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿದರು. ಅಮೀದ್ ಸಧರ್ ಉಸ್ತಾದರು, ಅಧ್ಯಕ್ಷ ಮೊಹಮ್ಮದ್ ಅಲಿ ಕುಙಿಮೋನ್, ನಾಗರಾಜ್ ಕಿಣಿ, ಅಯ್ಯೂಬ್ ಕೋಡಿ, ರಿಯಾಝ್ ಕೋಡಿ, ಹಂಝಾ ಕೆ.ಎಚ್.ಕೋಡಿ, ಕೆ.ಎ.ಮೊಹಮ್ಮದ್, ಮೊಹಮ್ಮದ್ ಮೊಹಿದ್ದೀನ್ ಕೋಡಿ, ಸಮಾಜ ಸೇವಕ ಅಬ್ಬಾಸ್ ಕೋಡಿ ಉಪಸ್ಥಿತರಿದ್ದರು.

ಕೋಟ ಪಂಚವರ್ಣ: ಕೋಟ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ನಿವೃತ್ತ ಯೋಧರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ರಾವ್ ಅವರನ್ನು ಸಂಮ್ಮಾನಿಸಿ ಗೌರವಿಸಲಾಯಿತು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಕೆ.ಮನೋಹರ್ ಪೂಜಾರಿ ವಹಿಸಿದ್ದರು. ಕೋಟ ಜಾಮೀಯಾ ಮಸೀದಿ ಅಧ್ಯಕ್ಷ ಇಬ್ರಾಹಿಂ ಸಾಹೇಬ್ ಕೋಟ, ಕಾರ್ಯದರ್ಶಿ ಬರ್ಷೀ ಸಾಹೇಬ್, ಕೋಟ ಗ್ರಾಪಂ ಮಾಜಿ ಅಧ್ಯಕ್ಷ ಅಜಿತ್ ದೇವಾಡಿಗ ಉಪಸ್ಥಿತರಿದ್ದರು.

ಉಡುಪಿ ರಥಬೀದಿ: ಉಡುಪಿ ರಥಬೀದಿಯ ರಿಕ್ಷಾ ಚಾಲಕರ ಹಾಗೂ ಮಾಲಿಕರ ಸಂಘದ ಆಶ್ರಯದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಪರ್ಯಾಯ ಶಿರೂರು ಮಠಾಧೀಶ ಶ್ರೀೀವೇದ ವರ್ಧನ ತೀರ್ಥ ಸ್ವಾಮೀಜಿ ನೇರವೇರಿಸಿದರು. ಭಾಸ್ಕರ್ ಸೇರಿಗಾರ್, ಸಂಘದ ಅಧ್ಯಕ್ಷ ಪ್ರಸಾದ್ ತಂತ್ರಿ ಅಲೆವೂರು ಹಾಜರಿದ್ದರು.

ಲಯನ್ಸ್ ಕ್ಲಬ್: ಲಯನ್ಸ್ ಕ್ಲಬ್ ಕುಂದಾಪುರ ವೆಯಿಟ್ ಝೋನ್ ಹಾಗು ವೆಯಿಟ್ ಝೋನ್ ಜಿಮ್ ಫಿಟ್ನೆಸ್ ಸೆಂಟರ್ ಕುಂದಾಪುರ ಆಶ್ರಯದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ದ್ವಜಾರೋಹಣವನ್ನು ಲಯನ್ಸ್ ಕ್ಲಬ್ ವೆಯಿಟ್ ಝೋನ್‌ನ ಅಧ್ಯಕ್ಷ ಹುಸೇನ್ ಹೈಕಾಡಿ ನೆರವೇರಿಸಿದರು.

ಜಿಮ್ ಫಿಟ್ನೆಸ್ ಸೆಂಟರ್ ಮಾಲಕ ರಾಘವೇಂದ್ರ ವಿಠಲ್ವಾಡಿ, ಲಯನ್ಸ್ ಕ್ಲಬ್ ಕುಂದಾಪುರ ವೆಯಿಟ್ ಝೋನ್ ಸ್ಥಾಪಕ ಅಧ್ಯಕ್ಷ ವಿಜಯ ಭಂಡಾರಿ, ಕಾರ್ಯದರ್ಶಿ ಪ್ರದೀಪ್ ಬಂಗೇರ, ಖಜಾಂಚಿ ಸಂದೀಪ್ ಕಾಮತ್ ಸದ್ಯಸ್ಯರಾದ ಸುಭಾಸ್ ಪೂಜಾರಿ, ಹರೀಶ್ ಕುಂದರ್, ರಾಘವೇಂದ್ರ, ಸುಧೀರ್ ನಾಯ್ಕ್, ರವಿ ಕುಂದರ್ ಉಪಸ್ಥಿತರಿದ್ದರು.

ಬಿಜೆಪಿ ಕಾಪು: ಭಾರತೀಯ ಜನತಾ ಪಾರ್ಟಿ ಕಾಪು ಮಂಡಲ ಕಚೇರಿಯಲ್ಲಿ ನಡೆದ 80ನೇ ಸ್ವಾತಂತ್ರ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಹಾಗೂ ಕಾಪು ಮಂಡಲ ಬಿಜೆಪಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಹಿರಿಯಡ್ಕ ಕಾಲೇಜು: ಹಿರಿಯಡಕದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಪ್ರಾಂಶುಪಾಲ ಡಾ.ಜಯಪ್ರಕಾಶ್ ಶೆಟ್ಟಿ ಹೆಚ್. ನೆರವೇರಿಸಿದರು.

ರಾ.ಸೇ.ಯೋಜನೆಯ ಯೋಜನಾಧಿಕಾರಿ ನಂದೀಶ್ ಕುಮಾರ್ ಕೆ.ಸಿ., ಕಾರ್ಯಕ್ರಮವನ್ನು ಸಂಯೋಜಿಸಿ ನಿರೂಪಿಸಿದರು. ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು ಪಾಲ್ಗೊಂಡರು.

ಮಂಗಳ ಕಲಾ ಸಾಹಿತ್ಯ: ಪರ್ಕಳ ಮಂಗಳ ಕಲಾ ಸಾಹಿತ್ಯ ವೇದಿಕೆ ವತಿಯಿಂದ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣವನ್ನು ಪರ್ಕಳದ ಉದ್ಯಮಿ ಮೋಹನ್‌ದಾಸ್ ನಾಯಕ್ ನೆರವೇರಿಸಿದರು.

ವೇದಿಕೆ ಗೌರವಾಧ್ಯಕ್ಷ ಪ್ರಕಾಶ್ ಶೆಣೈ, ಅಧ್ಯಕ್ಷ ಗಣೇಶ್ ಕುಲಾಲ್, ಅಶೋಕ್ ಸಣ್ಣಕ್ಕಿಬೆಟ್ಟು, ಸದಸ್ಯರಾದ ಗೋಪಿ ಹಿರೇಬೆಟ್ಟು, ಗಣೇಶ್ ಸಣ್ಣಕ್ಕಿ ಬೆಟ್ಟು, ಸಂದೀಪ್ ನಾಯ್ಕ್ ಕಬ್ಯಾಡಿ, ರಾಜೇಶ್ ನಾಯಕ್ ಸಣ್ಣಕ್ಕಿಬೆಟ್ಟು, ರಾಘವೇಂದ್ರ ನಾಯಕ್ ಸಣ್ಣಕ್ಕಿ ಬೆಟ್ಟು ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಜೆಡಿಎಸ್: ಉಡುಪಿ ಜಿಲ್ಲಾ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣವನ್ನು ಜಿಲ್ಲಾಧ್ಯಕ್ಷ ಯೋಗೀಶ್ ವಿ.ಶೆಟ್ಟಿ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಯರಾಮ ಆಚಾರ್ಯ, ಉಡುಪಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಜಯ ಪೂಜಾರಿ, ಕಾಪು ಕ್ಷೇತ್ರದ ಅಧ್ಯಕ್ಷ ದೇವರಾಜ್ ತೊಟ್ಟಂ, ಯುವ ಜನತಾದಳದ ಅಧ್ಯಕ್ಷ ಸಂಜಯ್ ಕುಮಾರ್, ಜಿಲ್ಲಾ ಮಹಿಳಾ ಕಾರ್ಯಾಧ್ಯಕ್ಷರಾದ ಅನಸೂಯ ಶೆಟ್ಟಿ, ನಾಯಕರುಗಳಾದ ಕೀರ್ತಿರಾಜ್, ಆಶ್ರಫ್ ಪಡುಬಿದ್ರೆ, ವಿನ್ಸೆಂಟ್ ಸುನಿಲ್ ಡಿ ಅಲ್ಮೇಡಾ, ಹರಣಿ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

ಉಡುಪಿ ಬಿಜೆಪಿ: ಬಿಜೆಪಿ ಉಡುಪಿ ಜಿಲ್ಲೆ ಹಾಗೂ ಉಡುಪಿ ನಗರ ಮಂಡಲದ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಧ್ವಜಾರೋಹಣವನ್ನು ನೆರವೇರಿಸಿದರು.

ಉಡುಪಿ ಶಾಸಕ ಯಶ್ಪಾಲ್ ಎ.ಸುವರ್ಣ, ಮುಖಂಡರಾದ ಕೆ.ಉದಯ ಕುರ್ಮಾ ಶೆಟ್ಟಿ, ದಿನೇಶ್ ಅಮೀನ್, ರೇಷ್ಮಾ ಉದಯ ಶೆಟ್ಟಿ, ಶ್ರೀಕಾಂತ್ ನಾಯಕ್, ಶಿಲ್ಪಾ ಜಿ.ಸುವರ್ಣ, ದಿನಕರ ಬಾಬು, ನಳಿನಿ ಪ್ರದೀಪ್ ರಾವ್, ರವಿ ಅಮೀನ್, ಸತ್ಯಾನಂದ ನಾಯಕ್, ಶ್ರೀನಿಧಿ ಹೆಗ್ಡೆ, ಗಿರೀಶ್ ಎಮ್. ಅಂಚನ್, ಶಿವಕುಮಾರ್ ಅಂಬಲಪಾಡಿ, ಮಧುಕರ ಮುದ್ರಾಡಿ, ಮಂಜುನಾಥ್ ಮಣಿಪಾಲ ಉಪಸ್ಥಿತರಿದ್ದರು.

ಕೊರಗ ಕಾಲೋನಿ: 80ನೇ ಸ್ವಾತಂತ್ರ್ಯೋತ್ಸವ ಅಂಗವಾಗಿ ಕೋಟತಟ್ಟು ಚಿಟ್ಟಿಬೆಟ್ಟು ಕೊರಗ ಕಾಲೋನಿಯಲ್ಲಿ ಎಲ್ಲಾಮನೆಗಳಿಗೆ ಪಾರಿಜಾತ ಗಿಡ ನೆಟ್ಟು ಪರಿಸರ ಜಾಗೃತಿ ಮೆರೆಯಲಾಯಿತು.

ಈ ಕಾರ್ಯಕ್ರಮದಲ್ಲಿ ಕೊರಗ ಮುಖಂಡರಾದ ಗಣೇಶ್ ಕೊರಗ ಕುಂಭಾಶಿ, ಗಣೇಶ್ ಕೊರಗ ಬಾರ್ಕೂರು, ಕೋಟತಟ್ಟು ಪಂಚಾಯತ್ ಮಾಜಿ ಸದಸ್ಯೆ ಸೀತಾ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News