ಕಾನೂನು ಪದವೀಧರರಿಗೆ ಶಿಷ್ಯವೇತನ: ಅರ್ಜಿ ಆಹ್ವಾನ

Update: 2026-08-17 22:04 IST

ಉಡುಪಿ, ಆ.17: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ ಮತ್ತು 3ಬಿ ಗಳಿಗೆ ಸೇರಿದ ಕಾನೂನು ಪದವೀಧರರಿಗೆ ವಕೀಲಿ ವೃತ್ತಿಯಲ್ಲಿ ತರಬೇತಿ ನೀಡಿ, ಶಿಷ್ಯವೇತನ ಮಂಜೂರು ಮಾಡಲು ಅರ್ಹ ಮತ್ತು ಆಸಕ್ತ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟಂಬರ್ 10 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಜಿಲ್ಲಾ ಕಚೇರಿಗಳ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂ.ಸಂಖ್ಯೆ:0820-2574881, 2573881 ಅನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News