ರಸ್ತೆ ಅಪಘಾತ: ಬೈಕ್ ಸವಾರ ಮೃತ್ಯು
Update: 2026-08-18 20:35 IST
ಉಡುಪಿ: ಉಡುಪಿಯ ನಿಟ್ಟೂರು ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಹೂಡೆ ಮೂಲದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟ ಬಗ್ಗೆ ವರದಿಯಾಗಿದೆ.
ಮೃತರನ್ನು ಸಾಗರದ ಜನ್ನತ್ ನಗರ ನಿವಾಸಿ ಬೆಟ್ಟೆ ಗಫಾರ್ ಎಂಬವರ ಮಗ ಬೆಟ್ಟೇ ಅಫ್ರಾನ್ ಎಂದು ಗುರುತಿಸಲಾ ಗಿದೆ. ಆ.16ರಂದು ಉಡುಪಿಯ ನಿಟ್ಟೂರು ಬಳಿ ನಡೆದ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಬೈಕ್ ಸವಾರ ಬೆಟ್ಟೇ ಅಫ್ರಾನ್ ತೀವ್ರವಾಗಿ ಗಾಯ ಗೊಂಡಿದ್ದರು. ತಕ್ಷಣವೇ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲದ ಆಸ್ಪತ್ರೆಗೆ ದಾಖಲಿಸಿ, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಗಂಭೀರ ಸ್ಥಿತಿಯಲ್ಲಿದ್ದ ಅವರು ಆ.17ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರು ಎಂದು ತಿಳಿದುಬಂದಿದೆ.