ಗೃಹಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್

Update: 2026-08-19 20:19 IST

ಉಡುಪಿ, ಆ.19: ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮನೆ ಗಳ ಮರುಪರಿಶೀಲನೆಗೆ ರಾಜ್ಯ ಸರಕಾರ ಜೂನ್ ತಿಂಗಳ ಅಂತ್ಯದಲ್ಲಿ ಆದೇಶ ಹೊರಡಿಸಿದ್ದು, ಇಂಧನ ಇಲಾಖೆ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳು ಈ ಆದೇಶದ ಅನುಷ್ಠಾನದ ಭಾಗವಾಗಿ ಜು.1ರಿಂದ ಗೃಹ ಜ್ಯೋತಿ ಫಲಾನುಭವಿಗಳ ಮನೆಗಳ ಮರುಪರಿಶೀಲನೆ ಪ್ರಕ್ರಿಯೆಯನ್ನು ಆರಂಭಿಸಿವೆ. ಈ ಪ್ರಕ್ರಿಯೆ ಆಗಸ್ಟ್ 31ರವರೆಗೆ ನಡೆಯಲಿದೆ.

ಈಗಾಗಲೇ ಉಡುಪಿ ತಾಲೂಕಿನಲ್ಲಿ ಮರುಪರಿಶೀಲನೆ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಬಾಕಿ ಉಳಿದಿರುವ ಗೃಹ ಜ್ಯೋತಿ ಫಲಾನುಭವಿಗಳು ಕೂಡಲೇ ಮರುಪರಿಶೀಲನೆಗೆ ಅಗತ್ಯವಿರುವ ದಾಖಲೆ ಗಳನ್ನು ಸಿದ್ಧಪಡಿಸಿ ಕೊಂಡು, ಹತ್ತಿರದ ಮೆಸ್ಕಾಂ ಕಚೇರಿಯನ್ನು ಸಂಪರ್ಕಿಸಿ ಮರುಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಕೊಳ್ಳುವಂತೆ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಪ್ರಕಟಣೆಯ ಮೂಲಕ ಮನವಿ ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News