ಫೆಲೋಶಿಪ್ : ಅರ್ಜಿ ಆಹ್ವಾನ

Update: 2026-08-20 21:43 IST

ಉಡುಪಿ, ಆ.20: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಭಾರತ ಸರ್ಕಾರದ ಶಾಸನಬದ್ಧ ಅಂಗೀಕೃತ ವಿಶ್ವವಿದ್ಯಾನಿಲಯಗಳಲ್ಲಿ ಪೂರ್ಣಕಾಲಿಕವಾಗಿ ಪಿಎಚ್‌ಡಿ ಕೋರ್ಸ್‌ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಮತೀಯ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಮೂರು ವಷರ್ ಅವಧಿಗೆ ಫೆಲೋಶಿಪ್ ಸೌಲಭ್ಯ ಪಡೆಯಲು ಸೇವಾಸಿಂಧು ತಂತ್ರಾಂಶ -https://sevasindhu.karnataka.gov.in/sevasindhu/DepartmentService-ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸಹಾಯವಾಣಿ ಸಂಖ್ಯೆ: 8277799990 ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನಾ ಆಜಾದ್ ಭವನ, ಅಲೆವೂರು ರಸ್ತೆ, ಮಣಿಪಾಲ ಅಥವಾ ಜಿಲ್ಲಾ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ ದೂ.ಸಂಖ್ಯೆ: 0820-2574596 ಅಥವಾ ಕಾರ್ಕಳ ದೂ.ಸಂಖ್ಯೆ: 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News