ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Update: 2026-08-21 21:55 IST

ಕೋಟ, ಆ.21: ಉಳ್ತೂರು ಗ್ರಾಮದ ಹಲ್ತೂರು ಎಂಬಲ್ಲಿ ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಬಗ್ಗೆ ವರದಿಯಾಗಿದೆ.

ಮೃತರನ್ನು ಉಳ್ತೂರು ಗ್ರಾಮದ ಭುಜಂಗ ಶೆಟ್ಟಿ(56) ಎಂದು ಗುರುತಿಸ ಲಾಗಿದೆ. ಇವರು ಆ.8ರಂದು ಮನೆಯ ಜಾಗದಲ್ಲಿಯ ಅಡಿಕೆ ಮರ ಮರದ ತಲೆಯನ್ನು ಕತ್ತರಿಸುವಾಗ ಆಕಸ್ಮಿಕವಾಗಿ ಸುಮಾರು 20 ಅಡಿ ಎತ್ತರದಿಂದ ನೆಲಕ್ಕೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು, ಆ.20ರಂದು ಸಂಜೆ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News