ಕುಸಿದು ಬಿದ್ದು ವಿದ್ಯಾರ್ಥಿ ಮೃತ್ಯು
Update: 2026-08-21 21:58 IST
ಕಾರ್ಕಳ, ಆ.21: ವಿದ್ಯಾರ್ಥಿಯೊಬ್ಬ ಪ್ರಜ್ಞೆ ತಪ್ಪಿ ಬಿದ್ದು ಮೃತಪಟ್ಟ ಘಟನೆ ಆ.21ರಂದು ಬೆಳಗ್ಗೆ 7.30ರ ಸುಮಾರಿಗೆ ನಡೆದಿದೆ.
ಮೃತರನ್ನು ತುಮಕೂರು ಜಿಲ್ಲೆಯ ತಿಪಟೂರುವಿನ ಚಿರಾಗ್ ಎ.ಎಂ.(16) ಎಂದು ಗುರುತಿಸಲಾಗಿದೆ. ಹಿರ್ಗಾನ ಗ್ರಾಮದ ಕ್ರಿಯೆಟಿವ್ ಪಿ.ಯು ಕಾಲೇಜಿನಲ್ಲಿ ಪ್ರಥಮ ವರ್ಷದ ಪಿಯುಸಿ ಕಲಿಯುತ್ತಿದ್ದು ಹಾಸ್ಟೆಲ್‌ನಲ್ಲಿ ಉಳಕೊಂಡಿದ್ದನು.
ಕಾಲೇಜಿನಲ್ಲಿ ಇರುವಾಗ ಪ್ರಜ್ಞೆ ತಪ್ಪಿ ಬಿದ್ದ ಚಿರಾಗ್‌ನನ್ನು ಚಿಕಿತ್ಸೆಗಾಗಿ ಕಾರ್ಕಳ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಪರೀಕ್ಷಿಸಿದ ವೈದ್ಯರು ಚಿರಾಗಣ ಮೃತಪಟ್ಟಿರುವುದಾಗಿ ತಿಳಿಸಿದರು. ಈ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.