ರಾಜಕೀಯ ಪಕ್ಷಗಳಿಗೆ ಕರಡು ಮತದಾರ ಪಟ್ಟಿ ಹಸ್ತಾಂತರ
ಉಡುಪಿ, ಆ.24: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ -2026 ಕ್ಕೆ ಸಂಬಂಧಿಸಿದಂತೆ ಕರಡು ಮತದಾರರ ಪಟ್ಟಿಯ ಸಿ.ಡಿ.ಗಳನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಇಂದು ಮಣಿಪಾಲದ ತಮ್ಮ ಕಚೇರಿ ಸಭಾಂಗಣ ದಲ್ಲಿ ವಿವಿಧ ರಾಜಕೀಯ ಪಕ್ಷಗಳ ಮುಖಂಡರಿಗೆ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ರಾಜಕೀಯ ಪಕ್ಷಗಳ ಮುಖಂಡರಾದ ಭಾರತೀಯ ಜನತಾ ಪಕ್ಷದ ಚಂದ್ರಶೇಖರ ಪ್ರಭು, ಜೆಡಿಎಸ್‌ನ ಜಯರಾಮ್ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.