ಕುಂದಾಪುರ, ಆ.25: ಶ್ರೀಸಿದ್ದಿ ವಿನಾಯಕ ಚೆಸ್ ಅಕಾಡೆಮಿ ಕುಂದಾಪುರ ಹಾಗೂ ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್, ಬಸ್ರೂರು ಸ್ಪೋರ್ಟ್ಸ್ ಕ್ಲಬ್ ಆಶ್ರಯದಲ್ಲಿ ಅಂತರ್ ಜಿಲ್ಲಾ ಮಟ್ಟದ ಓಪನ್ ರ್ಯಾಪಿಡ್ ಚೆಸ್- 45ನೇ ಸಿದ್ದಿ ವಿನಾಯಕ ಟ್ರೋಫಿ ಪಂದ್ಯಾಟ ರವಿವಾರ ಕುಂದಾಪುರ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ನಡೆಯಿತು.

ಚೆಸ್ ಆಡುವ ಮೂಲಕ ಉದ್ಘಾಟಿಸಿದ ವಕೀಲ ರವಿಕಿರಣ್ ಮುರ್ಡೇಶ್ವರ ಮಾತನಾಡಿ, ಚೆಸ್ ಕೇವಲ ಮಾನಸಿಕ ವಾಗಿ ಮಾತ್ರವಲ್ಲ, ದೈಹಿಕವಾಗಿಯೂ ನಿಮ್ಮನ್ನು ಸದೃಢಗೊಳಿಸುವ ಕ್ರೀಡೆಯಾಗಿದೆ. ಚೆಸ್ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥ್ ಆನಂದ್ ಅವರಂತಹ ಶ್ರೇಷ್ಠ ಕ್ರೀಡಾಪಟುಗಳು ಪಂದ್ಯಾ ಕೂಟಕ್ಕೂ ಮೊದಲು ನಡೆಸುವ ತಯಾರಿ ಎಲ್ಲ ಚದುರಂಗ ಪಟುಗಳಿಗೆ ಮಾದರಿಯಾಗಬೇಕು ಎಂದರು.

ಕುಂದಾಪುರ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಅಶೋಕ ಪೂಜಾರಿ ಬೀಜಾಡಿ ಮಾತನಾಡಿ, ಕ್ರೀಡೆಯಲ್ಲಿ ಪಾಲ್ಗೊಳ್ಳುವುದು ಬಹಳ ಮುಖ್ಯ. ಸೋಲು - ಗೆಲುವು ಮುಖ್ಯವಲ್ಲ. ಕ್ರೀಡಾ ಚಟುವಟಿಕೆಗಳಿಗೆ ನಮ್ಮ ಸಂಘವು ನಿರಂತರ ಪ್ರೋತ್ಸಾಹ ನೀಡುತ್ತದೆ ಎಂದು ಹೇಳಿದರು.

ಬಿಲ್ಲವ ಸಂಘದ ಪ್ರಧಾನ ಕಾರ್ಯದರ್ಶಿ ಯೋಗೀಶ್ ಪೂಜಾರಿ ಕೋಡಿ, ಬಸ್ರೂರು ಸ್ಪೋರ್ಟ್ಸ್ ಕ್ಲಬ್ ಅಧ್ಯಕ್ಷ ಶಫಿ, ಉಡುಪಿ ಜಿಲ್ಲಾ ಚೆಸ್ ಅಸೋಸಿಯೇಶನ್ ಅಧ್ಯಕ್ಷ ಉಮಾನಾಥ್, ಪ್ರಮುಖರಾದ ಅಶೋಕ ಕೆ.ಪಿ., ಮತ್ತಿತರರು ಉಪಸ್ಥಿತರಿದ್ದರು. ಶ್ರೀಸಿದ್ದಿ ವಿನಾಯಕ ಚೆಸ್ ಅಕಾಡೆಮಿ ಸಂಚಾಲಕ ಬಾಬು ಪೂಜಾರಿ ಉಪ್ಪುಂದ ಸ್ವಾಗತಿಸಿ, ಪ್ರಸ್ತಾವಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor