ಉಡುಪಿ, ಆ.27: ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ದೌರ್ಜನ್ಯ ತಡೆ ಅಧಿನಿಯಮದಡಿಯಲ್ಲಿ ದಾಖಲಾದ ಪ್ರಮುಖ ಪ್ರಕರಣಗಳಿಗೆ(ಕೊಲೆ, ಅತ್ಯಾಚಾರ, ಪೋಕ್ಸೋ, ಕೊಲೆ ಪ್ರಯತ್ನ, ತೀವ್ರ ಗಾಯ ಹಾಗೂ 7 ವರ್ಷಗಳಿಗೂ ಮೇಲ್ಪಟ್ಟು ಶಿಕ್ಷೆ ಇರುವ ಪ್ರಕರಣಗಳು) ಸಂಬಂಧಿಸಿದಂತೆ ಪ.ಜಾತಿ/ಪ.ಪಂಗಡಗಳ (ದೌರ್ಜನ್ಯ ತಡೆ) ನಿಯಮಗಳು -1995ರಲ್ಲಿನ ನಿಯಮ-4ರ ಅನ್ವಯ ನ್ಯಾಯಾಲಯದಲ್ಲಿ ಸಮರ್ಥ ವಾಗಿ ವಾದ ಮಂಡಿಸಲು ನುರಿತ ಹಾಗೂ ಅನುಭವಿ ನ್ಯಾಯವಾದಿಗಳನ್ನು ವಿಶೇಷ ಸಾರ್ವಜನಿಕ ಅಭಿಯೋಜಕರ ನ್ನಾಗಿ ನಿಯಮಾನುಸಾರ ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ತಮ್ಮ ಸ್ವ-ವಿವರವುಳ್ಳ ಅರ್ಜಿ ಹಾಗೂ ಇತರೆ ವಿವರಗಳನ್ನೊಳಗೊಂಡ ದಾಖಲಾತಿಗಳೊಂದಿಗೆ ಸೆ.7ರ ಒಳಗಾಗಿ ಉಪನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, 2ನೇ ಮಹಡಿ, ಬಿ ಬ್ಲಾಕ್, ರಜತಾದ್ರಿ, ಮಣಿಪಾಲ ಉಡುಪಿ ಇವರಿಗೆ ಅಂಚೆ ಮೂಲಕ ಅಥವಾ ಖುದ್ದಾಗಿ ಸಲ್ಲಿಸಬಹುದಾಗಿದೆ ಎಂದು ಇಲಾಖೆಯ ಕಚೇರಿ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor