ಉಡುಪಿ, ಆ.30: ಕಳ್ತೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕೆಂಜೂರಿನಲ್ಲಿ ಸುಮಾರು 65 ಲಕ್ಷ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣ ಗೊಳ್ಳಲಿರುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಕಾಮಗಾರಿಗೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಶಿಲಾನ್ಯಾಸ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಗ್ರಾಮೀಣ ಭಾಗದ ಜನತೆಯ ಆರೋಗ್ಯ ಸೇವೆಗೆ ವಿಶೇಷ ಆದ್ಯತೆ ನೀಡುತ್ತಿದ್ದು, ಸುಮಾರು 65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುವ ಆಯುಷ್ಮಾನ್ ಆರೋಗ್ಯ ಕೇಂದ್ರದ ಮೂಲಕ ಸ್ಥಳೀಯ ಜನತೆಗೆ ಉತ್ತಮ ಸೇವೆಯ ಜೊತೆಗೆ ಉತ್ತಮ ಆರೋಗ್ಯವಂತ ಸಮಾಜದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯವಾಗಲಿ ಎಂದರು.

ಸಮಾರಂಭದಲ್ಲಿ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಪ್ರತಾಪ ಹೆಗ್ಡೆ ಮಾರಾಳಿ, ವೈದ್ಯಾಧಿಕಾರಿ ಡಾ ಸವಿತಾ ಕುಂದರ್, ಸ್ಥಳೀಯ ಮುಖಂಡರಾದ ಆದರ್ಶ್ ಶೆಟ್ಟಿ ಕೆಂಜೂರು, ದಿನೇಶ ಶೆಟ್ಟಿ, ರಮಾನಂದ ಶೆಟ್ಟಿ, ನಾಗೇಶ ನಾಯಕ್, ಉಷಾ ಪೂಜಾರಿ, ಮನೋಜ ಕುಮಾರ್, ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಸುಧಾಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor